ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬೆಳಂಬೆಳಗ್ಗೆ ನೆತ್ತರು ಹರಿದಿದೆ. ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಯನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ರಾಜು ದೊಡ್ಡಬಣ್ಣವರ (46) ಹತ್ಯೆಯಾದ ವ್ಯಕ್ತಿ. ಈತ ಬಿಲ್ಡರ್ ಆಗಿ ಕೆಲಸ ಮಾಡುತ್ತಿದ್ದನು. ನಗರದ ಗುರುಪ್ರಸಾದ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ.
ಬಸ್ತವಾಡ ಗ್ರಾಮದ ರಾಜು ಸದ್ಯ ಭವಾನಿ ನಗರದಲ್ಲಿ ವಾಸವಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ನಿ ನೋಡಲು ಬೆಳಗ್ಗೆ ರಾಜು ತಮ್ಮ ಕಾರಿನಲ್ಲಿ ಹೊರಟಿದ್ದರು. ಆಗ ರಾಜು ಅವರ ಕಾರು ತಡೆದಿರುವ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಇದನ್ನೂ ಓದಿ: ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು
ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವ ಕಂಡ ವಾಯುವಿಹಾರ ಮಾಡುತ್ತಿದ್ದ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಹತ್ಯೆಗೆ ಹಳೇ ದ್ವೇಷ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಈ ಘಟನೆ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.