ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್ (Mayor), ಉಪಮೇಯರ್ (Deputy Mayor) ಸ್ಥಾನಕ್ಕೆ ಸೋಮವಾರ (ಇಂದು) ಚುನಾವಣೆ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ಕಚೇರಿ ಮುಂಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
Advertisement
ಬೆಳಗಾವಿ ಮಹಾನಗರ ಪಾಲಿಕೆ (Belagavi City Corporation) ಚುನಾವಣೆ (Election) ನಡೆದು 16ತಿಂಗಳ ಬಳಿಕ ಇಂದು ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.ಅದರಲ್ಲಿ ಪ್ರಮುಖವಾಗಿ ಮಹಿಳಾ ಸದಸ್ಯರ ಮಧ್ಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಫೈಟ್ ನಡೆದಿದೆ. ಮಧ್ಯಾಹ್ನ 1ರವರಗೆ ನಾಮಪತ್ರಗಳ ಸ್ವೀಕಾರ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಸಭೆ ನಂತರ ನಾಮಪತ್ರಗಳ ಪರಿಶೀಲನೆ ಆಗುತ್ತದೆ. ಬಳಿಕ ಕ್ರಮಬದ್ಧ ನಾಮನಿರ್ದೇಶನ, ಘೋಷಣೆ ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅವಕಾಶವಿದೆ. ಇನ್ನೂ ಮತದಾನದ ಎಣಿಕೆ ನಂತರ ಮೇಯರ್ ಆಯ್ಕೆಯನ್ನ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್
Advertisement
Advertisement
ಬೆಳಗಾವಿ ಮಹಾನಗರ ಪಾಲಿಕೆ ಸುತ್ತ 144 ಸೆಕ್ಷನ್ ಜಾರಿ: ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮಹಾನಗರ ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ ಮುಂದೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಿದೆ. ಇದಲ್ಲದೇ ನಗರಪಾಲಿಕೆ 200 ಮೀಟರ್ ಅಂತರದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದು, ನಾಲ್ಕು ಜನಕ್ಕಿಂತ ಹೆಚ್ಚು ಜನ ಸೇರದಂತೆ ಪೊಲೀಸ್ ವಾಹನದಲ್ಲಿ ದ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡಲಾಗುತ್ತಿದೆ.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k