Connect with us

Belgaum

ನಡುರಸ್ತೆಯಲ್ಲೇ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ‘ಕೈ’ ಮುಖಂಡರು

Published

on

ಬೆಳಗಾವಿ: ಕ್ಲುಲಕ ಕಾರಣಕ್ಕೆ ಕಾಂಗ್ರೆಸ್ ಮುಖಂಡರು ನಡುರಸ್ತೆಯಲ್ಲೇ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯ ಖಾನಾಪುರದಲ್ಲಿ ನಡೆದಿದೆ.

ಕರಿಂ ಲಾಲಾ ತೆಲಗಿ ಅಳಿಯನಾದ ಯೂತ್ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್ ತಾಳಿಕೋಟೆ ಮತ್ತು ಪಟ್ಟಣ ಪಂಚಾಯತ್ ಸದಸ್ಯ ರಫೀಕ್ ವಾರಿಮನಿ ನಡುವೆ ಈ ಮಾರಾಮಾರಿ ನಡೆದಿದೆ. ಒಬ್ಬರಿಗೊಬ್ಬರು ನಡು ರಸ್ತೆಯಲ್ಲಿ ಬಡಿದಾಟ ಮಾಡಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಈ ಇಬ್ಬರು ನಾಯಕರು ತಮ್ಮ ಕೈಯಲ್ಲಿ ಚಪ್ಪಲಿ ಹಿಡಿದುಕೊಂಡು ಒಬ್ಬರಿಗೊಬ್ಬರು ಹಿಗ್ಗಾಮುಗ್ಗ ಥಳಿಸಿಕೊಂಡಿದ್ದಾರೆ. ಈ ಸಂಬಂಧ ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *