ಬೆಳಗಾವಿ: ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ್ ಪಾಟೀಲ್ (Chandrakant Patil) ಮುಖಕ್ಕೆ ಕಪ್ಪು ಮಸಿ ಬಳಿದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಿನ್ನೆ ಸಂಜೆ ನಡೆದಿದೆ.
Advertisement
ಡಾ.ಬಿ.ಆರ್.ಅಂಬೇಡ್ಕರ್ (Ambedkar), ಮಹಾತ್ಮ ಜ್ಯೋತಿಬಾ ಫುಲೆ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ (Maharashtra) ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ್ ಪಾಟೀಲ್ (Chandrakant Patil) ಮುಖಕ್ಕೆ ಕಪ್ಪು ಮಸಿ ಬಳಿಯಲಾಗಿದೆ. ಮಹಾರಾಷ್ಟ್ರದ ಪುಣೆಯ ಕಾರ್ಯಕರ್ತರೊಬ್ಬರ ಮನೆಗೆ ತೆರಳಿ ಹೊರಬರುತ್ತಿದ್ದಂತೆ ವ್ಯಕ್ತಿಯೊಬ್ಬ ಬೆಂಗಾವಲು ವಾಹನವನ್ನೂ ಲೆಕ್ಕಿಸದೇ ಮುಖಕ್ಕೆ ಮಸಿ ಎರಚಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿದ ವ್ಯಕ್ತಿಯನ್ನು ಪುಣೆ ಮಹಾನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
Advertisement
ಚಂದ್ರಕಾಂತ್ ಪಾಟೀಲ್, `ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಫುಲೆ ಭಿಕ್ಷಾಟನೆ ಮಾಡಿ ಶಾಲೆಗಳನ್ನು ಕಟ್ಟಿಸಿದ್ದರು’ ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಬಳಿಕ ತಮ್ಮ ಹೇಳಿಕೆಗೆ ಚಂದ್ರಕಾಂತ್ ಕ್ಷಮೆಯಾಚಿಸಿದ್ದರು. ಇದನ್ನೂ ಓದಿ: ವೋಟ್ ಹಾಕದಿದ್ರೆ ಯುಜಿಡಿ ಕಾಮಗಾರಿ ಮಾಡಲ್ಲ: ಶಾಸಕ ಪ್ರೀತಂಗೌಡ
Advertisement
ಘಟನೆ ಬಳಿಕ `ಈ ರೀತಿ ಘಟನೆಗಳಿಗೆ ನಾನು ಹೆದರಲ್ಲ, ಪೊಲೀಸ್ ಭದ್ರತೆ ಇಲ್ಲದೇ ಬರ್ತೀನಿ. ಧಮ್ ಇದ್ರೆ ನನ್ನ ಎದುರಿಗೆ ಬನ್ನಿ. ಇದು ನಮ್ಮ ಸಂಸ್ಕೃತಿ ಅಲ್ಲ. ಇದನ್ನ ಮಹಾರಾಷ್ಟ್ರ ಸರ್ಕಾರ ಸಹಿಸಲ್ಲ. ನಾನು ಪೊಲೀಸರ ಮೇಲೆ ದೂಷಿಸಲ್ಲ. ನಾನು ಹೆದರಲ್ಲ, ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ಈ ರೀತಿಯ ಘಟನೆ ಡಾ.ಬಿ.ಆರ್.ಅಂಬೇಡ್ಕರ್‌ಗೆ ಮಾಡಿದ ಅಪಮಾನ’ ಎಂದು ಉದ್ಧಟತನ ಮೆರೆದಿದ್ದರು.
ಸಚಿವ ಚಂದ್ರಕಾಂತ್ ಪಾಟೀಲ ಇತ್ತೀಚೆಗೆ ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಸವಾಲು ಹಾಕಿ ಉದ್ಧಟತನ ಪ್ರದರ್ಶಿಸಿದ್ದರು. ಇದನ್ನೂ ಓದಿ: ಪ್ರಸಾದ್ ಬಿದ್ದಪ್ಪ ಪುತ್ರಿ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ
ಕರ್ನಾಟಕ ಸರ್ಕಾರಕ್ಕೆ ನಾನು ಹೇಳಬಯಸುತ್ತೇನೆ, ನಾವು ಯಾವುದೇ ಸಂಘರ್ಷ ಮಾಡಲು ಬರುತ್ತಿಲ್ಲ. 865 ಮರಾಠಿ ಭಾಷಿಕ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಏನು ಸೌಲಭ್ಯ ನೀಡಬಹುದು ಎಂಬ ಬಗ್ಗೆ ಚರ್ಚಿಸಲು ತೆರಳುತ್ತಿದ್ದೇನೆ. 865 ಹಳ್ಳಿಗಳು ಸಮಾಧಾನದಿಂದ ಇವೆ ಎಂದರೆ ಅದರ ಲಾಭ ನಿಮಗೆ ಇದೆ. ಕರ್ನಾಟಕ ಸರ್ಕಾರದ ನಾಗರಿಕರಿಗೆ ನೀವು ಸೌಲಭ್ಯ ನೀಡಲೇಬೇಕಾಗುತ್ತದೆ. ಆದ್ರೆ 865 ಮರಾಠಿ ಭಾಷಿಕ ಜನರನ್ನು ಮಹಾರಾಷ್ಟ್ರದ ನಾಗರಿಕರೆಂದು ನಾವು ಸೌಲಭ್ಯ ನೀಡುತ್ತೇವೆ. ಯಾವುದೇ ನಿಷೇಧ ಹೇರಿದರೂ ನಾನು ನಿಲ್ಲುವ ಮನುಷ್ಯನಲ್ಲ. ನನಗೆ ನೀವು ಧಮ್ಕಿ ಹಾಕಬೇಡಿ. ನಾವು ಎಚ್ಚರಿಕೆ ನೀಡಲು ಹೋಗುತ್ತಿದ್ದೇವೆ ಎಂದು ಅವರಿಗೆ ಅನಿಸುತ್ತಿದೆ. ಆದ್ರೆ, ನಾವು ಸಮನ್ವಯದಿಂದ ಜನರ ಮನಸ್ಥಿತಿ ತಿಳಿದು ಅವರಿಗೆ ಮಹಾರಾಷ್ಟ್ರ ಸರ್ಕಾರದ ನಿಲುವು ತಿಳಿಸಲು ತೆರಳುತ್ತಿದ್ದೇವೆ ಎಂದು ಗುಡುಗಿದ್ದರು.