Connect with us

ಎರಡು ಡೋಸ್ ಲಸಿಕೆ ಪಡೆದಿರುವ 113 ಮಂದಿ ಪೊಲೀಸರಿಗೆ ಕೊರೊನಾ..!

ಎರಡು ಡೋಸ್ ಲಸಿಕೆ ಪಡೆದಿರುವ 113 ಮಂದಿ ಪೊಲೀಸರಿಗೆ ಕೊರೊನಾ..!

ಬೆಳಗಾವಿ: ಕೋವಿಡ್ ಲಸಿಕೆ ಪಡೆದಿರುವ 113 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಬೆಳಗಾವಿ ಡಿಸಿಪಿ ವಿಕ್ರಂ ಆಮ್ಟೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಡಿಸಿಪಿ, ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯ 66 ಪೊಲೀಸ್ ಸಿಬ್ಬಂದಿ, ಅಧಿಕಾರಿಗಳಿಗೆ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಎಲ್ಲರೂ ಐಸೊಲೇಷನ್‍ನಲ್ಲಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯ 66 ಪೊಲೀಸ್ ಸಿಬ್ಬಂದಿ, ಬೆಳಗಾವಿ ಜಿಲ್ಲೆಯ 33 ಹಾಗೂ ಕೆಎಸ್‍ಆರ್‍ಪಿಯ 11 ಸಿಬ್ಬಂದಿಗೆ ಕೊರೊನಾ ಇರುವುದು ಗೊತ್ತಾಗಿದೆ. ಎಲ್ಲರೂ ಎರಡು ಡೋಸ್ ಲಸಿಕೆ ಪಡೆದ ಹಿನ್ನೆಲೆ ಪ್ರಾಣಾಪಾಯವಿಲ್ಲ. ಇದರಲ್ಲಿ ಬೆರಳೆಣಿಕೆಯಷ್ಟು ಪೊಲೀಸ್ ಸಿಬ್ಬಂದಿಗೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹೋಮ್ ಐಸೊಲೇಷನ್‍ನಲ್ಲಿದ್ದಾರೆ. ಸಂಕಷ್ಟದ ಸಮಯದಲ್ಲಿ ಪ್ರಾಣದ ಹಂಗು ತೊರೆದು ಪೊಲೀಸ್ ಸಿಬ್ಬಂದಿ ಕಾರ್ಯ ನಿರ್ವಹಿಸಿದ್ದರು.

Advertisement
Advertisement