ಚಿಕ್ಕೋಡಿ: ಸರ್ಕಾರಿ ಗೋಮಾಳ ಜಾಗಕ್ಕಾಗಿ ದಲಿತ ಹಾಗೂ ಸವರ್ಣಿಯ ಕುಟುಂಬಗಳ ಮಧ್ಯೆ ಗಲಾಟೆಯಾಗಿ ತಡರಾತ್ರಿ ದಲಿತ ಕುಟುಂಬದ (Dalit Family) ಗುಡಿಸಲುಗಳಿಗೆ ಬೆಂಕಿ (Fire) ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ.
ಸವರ್ಣಿಯ ಕುಟುಂಬದ ಸದಸ್ಯರು ದಲಿತ ಕುಟುಂಬದ ಗುಡಿಸಲುಗಳಿಗೆ ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಕಿಯ ಕೆನ್ನಾಲಗೆಗೆ ಗುಡಿಸಲುಗಳು ಸುಟ್ಟು ಕರಕಲಾಗಿವೆ.
Advertisement
Advertisement
ಮುಗಳಖೋಡ ಗ್ರಾಮದಲ್ಲಿನ ಗೋಮಾಳ ಜಾಗಕ್ಕಾಗಿ ಎರಡು ಕುಟುಂಬಗಳ ಮಧ್ಯೆ ಜಗಳವಿತ್ತು. ಗೋಮಾಳ ಜಾಗದಲ್ಲಿ ಶೆಡ್ ಹಾಕಿಕೊಂಡಿದ್ದ ಮಹಾದೇವ ಮಾದರ್ ಕುಟುಂಬ ಸುಮಾರು 12 ಗುಂಟೆ ಗೋಮಾಳ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಾಣ ಮಾಡಿದ್ದರು. ಇದನ್ನೂ ಓದಿ: ಮಳೆ ತಂದ ಸೌಭಾಗ್ಯ – ನಮ್ಮ ಮೆಟ್ರೋ ಆದಾಯದಲ್ಲಿ ಭಾರೀ ಏರಿಕೆ
Advertisement
ಈ ಗುಡಿಸಲುಗಳಿಗೆ ಊರಿನ ಮಹಾವೀರ ಕುರಾಡೆ ಕುಟುಂಬದವರು ಬೆಂಕಿ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಬಹಳ ದಿನಗಳಿಂದಲೂ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ಬೆಂಕಿ ಇಟ್ಟಿರುವ ವಿಡಿಯೋ ವೈರಲ್ ಆಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನ ಪೊಲೀಸರು ತಿಳಿಗೊಳಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .
Advertisement