– ಕಾರ್ಖಾನೆಗಳ ಸಕ್ಕರೆ ಜಪ್ತಿಗೆ ಹಿಂದೇಟು
ಬೆಳಗಾವಿ: ಜಿಲ್ಲಾಡಳಿತ ಸಕ್ಕರೆ ಕಂಪನಿಗಳ ಲಾಬಿಗೆ ಮಣಿದಿದ್ಯಾ ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ರೈತರ ಕಬ್ಬಿನ ಬಾಕಿ ಮಾಡದ ಕಾರ್ಖಾನೆಗಳ ಸಕ್ಕರೆ ಜಪ್ತಿಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.
ರೈತರಿಗೆ ಕಬ್ಬಿನ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳ ಸಕ್ಕರೆ ಜಪ್ತಿಗೆ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಆದೇಶಿಸಿದ್ದರು. ಆದರೆ ಆದೇಶ ಕೊಟ್ಟು 10 ದಿನವಾದರೂ ಸಕ್ಕರೆ ಮುಟ್ಟುಗೋಲು ಹಾಕಿಕೊಂಡಿಲ್ಲ. 9 ಸಕ್ಕರೆ ಕಾರ್ಖಾನೆಗಳು ರೈತರಿಗೆ 220 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿವೆ.
Advertisement
Advertisement
ಬಾಕಿ ಉಳಿಸಿಕೊಂಡ ಕಾರ್ಖಾನೆಗಳು:
ಖಾನಾಪುರ ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ, ಮುನವಳ್ಳಿ ರೇಣುಕಾ ಶುಗರ್ಸ್, ಕೊಳವಿಯ ಗೋಕಾಕ್ ಶುಗರ್ಸ್, ಬೈಲಹೊಂಗಲದ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ, ಬೆಲ್ಲದ ಬಾಗೇವಾಡಿ ವಿಶ್ವರಾಜ್ ಶುಗರ್ಸ್, ಅಥಣಿ ಶುಗರ್ಸ್, ಕೃಷ್ಣಾ ಶುಗರ್ಸ್, ಉಗಾರ ಶುಗರ್ಸ್, ಎಂ.ಕೆ ಹುಬ್ಬಳ್ಳಿ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಸೇರಿ ಜಿಲ್ಲೆಯ ಒಂಬತ್ತು ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲಿಗೆ ಆದೇಶ ನೀಡಲಾಗಿದೆ. ಜಿಲ್ಲೆಯ ಕಬ್ಬಿನ ಕಾರ್ಖಾನೆಗಳು ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಸೇರಿದ ಕಾರ್ಖಾನೆಗಳಿವೆ. ಶಾಸಕ ಉಮೇಶ್ ಕತ್ತಿ ಒಡೆತನದ ವಿಶ್ವರಾಜ್ ಸಕ್ಕರೆ ಕಾರ್ಖಾನೆ, ಶಾಸಕ ಶ್ರೀಮಂತ ಪಾಟೀಲ್ ಒಡೆತನದ ಅಥಣಿ ಶುಗರ್ಸ್ ಪಟ್ಟಿಯಲ್ಲಿವೆ.
Advertisement
Advertisement
ಸಿಎಂ ಎಚ್ಚರಿಕೆ: ಜೂನ್ 13 ರಂದು ವಿಧಾನಸಭೆಯಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಸಿದ್ದ ಸಿಎಂ ಅವರು ಜೂನ್ 15 ದಿನಗಳ ಒಳಗಾಗಿ ಕಾರ್ಖಾನೆಗಳು ಕಬ್ಬಿನ ಬಾಕಿ ಪಾವತಿ ಮಾಡಲು ವಿಫಲವಾದರೆ ಸಕ್ಕರೆ ಮುಟ್ಟುಗೋಲು ಹಾಕಿಕೊಂಡು ಆ ರೈತರಿಗೆ ಹಣ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದರು. ಅಲ್ಲದೇ ಒಂದು ವೇಳೆ ಸಕ್ಕರೆ ಕಾರ್ಖಾನೆ ರೈತರಿಗೆ ಬಾಕಿ ಹಣ ಕೊಡಿಸಲು ವಿಫಲವಾದರೆ ಆಯಾ ಜಿಲ್ಲಾಧಿಕಾರಿಗಳಿಗೆ ಹೊಣೆ ಎಂದು ಎಚ್ಚರಿಸಿದ್ದರು.