ಬೆಳಗಾವಿ: ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ರಕ್ಕಸಕೊಪ್ಪ ಜಲಾಶಯವು ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗಿದ್ದು, ಜನತೆಯ ಮೊಗದಲ್ಲಿ ಸಂತಸಕ್ಕೆ ಕಾರಣವಾಗಿದೆ.
ಖಾನಾಪುರದ ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಒಟ್ಟು 0.62 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯ ಇರುವ ರಕ್ಕಸಕೊಪ್ಪ ಜಲಾಶಯ ಇದೀಗ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಜಲಾಶಯದ ಗೇಟ್ ಗಳ ಮೂಲಕ ಮಾರ್ಕಂಡೇಯ ನದಿಗೆ ನೀರು ಬಿಡಲಾಗುತ್ತಿದೆ.
Advertisement
ಕಳೆದ ವರ್ಷ ಸೆಪ್ಟೆಂಬರ್ 15 ರಂದು ಭರ್ತಿಯಾಗಿದ್ದ ಜಲಾಶಯ ಈ ವರ್ಷ ಒಂದು ತಿಂಗಳು ಮೊದಲೇ ಭರ್ತಿಯಾಗಿದೆ. ವರ್ಷ ಪೂರ್ತಿ ಬೆಳಗಾವಿ ನಗರಕ್ಕೆ ರಕ್ಕಸಕೊಪ್ಪ ಜಲಾಶಯದಿಂದಲೇ ನೀರು ಪೂರೈಕೆಯಾಗುತ್ತದೆ. ಅಲ್ಲದೇ ಜಿಲ್ಲೆಯ ಕುಡಿಯುವ ನೀರು ಪೂರೈಕೆಗೆ ರಕ್ಕಸಕೊಪ್ಪ ಜಲಾಶಯವೇ ಮೂಲ ಆಧಾರವಾಗಿದೆ.