– ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು
ಹುಬ್ಬಳ್ಳಿ: ಬೆಳಗಾವಿ (Belagavi) ಜಿಲ್ಲೆಯ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯನ್ನು ವಿಭಾಗಿಸುವುದು ಒಳ್ಳೆಯದು. ಆದರೆ ಅದನ್ನು ವೈಜ್ಞಾನಿಕವಾಗಿ ವಿಭಾಗಿಸಬೇಕು ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಆಡಳಿತಯಂತ್ರ ಸರಿಯಾಗಿ ಇರಬೇಕೆಂದರೆ ಜಿಲ್ಲೆಗಳು, ತಾಲೂಕು ಚಿಕ್ಕ ಚಿಕ್ಕದಾಗಿರಬೇಕು. ಬೆಳಗಾವಿಯು ಇಬ್ಭಾಗವಾಗಿ ಪ್ರತ್ಯೇಕ ಜಿಲ್ಲೆಯಾಗಬೇಕು. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದರು. ಇದನ್ನೂ ಓದಿ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ನಾಲ್ವರು ಸಾವು
ಯತ್ನಾಳ್‌ರ ವೈಯಕ್ತಿಕ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ. ಸಿಎಂ ಆಗಲು ಮಹಾನ್ ನಾಯಕ ಸಾವಿರ ಕೋಟಿ ತೆಗೆದಿಟ್ಟಿದ್ದಾರೆ ಅನ್ನೋದು ಯತ್ನಾಳ್ ವೈಯಕ್ತಿಕ ಹೇಳಿಕೆ. ಯತ್ನಾಳ್ ಹೇಳಿಕೆಗೆ ನಾನು ಕಾಮೆಂಟ್ ಮಾಡುವುದಿಲ್ಲ. ಅವರು ಪ್ರತ್ಯೇಕ ಸಭೆ ಮಾಡಿದ್ದರ ಬಗ್ಗೆಯೂ ಮಾತನಾಡುವುದಿಲ್ಲ. ನಾನು ಯಾಕೆ ಅದರ ಬಗ್ಗೆ ಮಾತನಾಡಲಿ. ಈ ನಿಟ್ಟಿನಲ್ಲಿ ಪಕ್ಷ ಅಗತ್ಯ ಕ್ರಮ ಕೈಗೊಳ್ಳುತ್ತದೆ. ಅವರ ಹೇಳಿಕೆ ಅವರಿಗೇ ಸೀಮಿತ ಎಂದು ಹೇಳಿದರು. ಇದನ್ನೂ ಓದಿ: MUDA Case: ಸಿಎಂಗೆ ಮತ್ತೊಂದು ಸಂಕಷ್ಟ – ಸಿದ್ದರಾಮಯ್ಯ ವಿರುದ್ಧ ED ಎಫ್‌ಐಆರ್ ಸಾಧ್ಯತೆ
ಸಿಎಂ (CM Siddaramaiah) ರಾಜೀನಾಮೆ ವಿಚಾರವಾಗಿ ಮಾತನಾಡಿ, ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಆದರೆ ಭಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ? ಅವರು ಇನ್ನಾದರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎಂದು ಹೇಳಿಕೊಳ್ಳುತ್ತಾರೆ. ನೈತಿಕತೆ ಬಗ್ಗೆ ಮಾತನಾಡುತ್ತಾರೆ. ಎಲ್ಲರ ಮೇಲೆ ಎಫ್‌ಐಆರ್ ಹಾಕಿಸಿ ತೊಂದರೆ ಕೊಡುವುದು ಆರಂಭ ಆಗಿದೆ. ಮುಡಾ ಹಗರಣದಲ್ಲಿ ಜನರ ಆಲೋಚನೆಯನ್ನು ಬದಲಾಯಿಸಿವುದಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧ FIR – ಮಧ್ಯಂತರ ತಡೆ ನೀಡಿದ ಹೈಕೋರ್ಟ್
ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಕೇಂದ್ರ ಸಚಿವರ ಮೇಲೆ ಎಫ್‌ಐಆರ್ ಇದ್ದರೆ ಪ್ರಾಮಾಣಿಕವಾಗಿ ತನಿಖೆ ಮಾಡಲಿ. ಕೇಂದ್ರ ಮಂತ್ರಿಗಳ ಮೇಲೆ ಅಧಿಕಾರಿ ಕೆಟ್ಟದಾಗಿ ಮಾತನಾಡುತ್ತಾರೆ. ಕಾಂಗ್ರೆಸ್ ಪಕ್ಷದ ಮಾರ್ಗದರ್ಶನದಲ್ಲಿ ಇದೆಲ್ಲ ನಡೆಯುತ್ತಿದೆ. ಕುಮಾರಸ್ವಾಮಿ ( H D Kumaraswamy) ಅವರು ಕೇಂದ್ರಕ್ಕೆ ಈ ಬಗ್ಗೆ ದೂರು ನೀಡಿದ್ದಾರೆ. ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳೋದು ಅನಿವಾರ್ಯ ಆಗುತ್ತದೆ ಎಂದರು.
ನಿರ್ಮಲಾ ಸೀತಾರಾಮನ್ ಮೇಲೆ ನ್ಯಾಯಾಧೀಶರ ಸೂಚನೆ ಮೇಲೆ ಎಫ್‌ಐಆರ್ ಮಾಡಿದ್ದಾರೆ. ನ್ಯಾಯಾಧೀಶರ ಸೂಚನೆಗೆ ನಾನೇನು ಪ್ರತಿಕ್ರಿಯೆ ನೀಡಲ್ಲ. ಆದರೆ ಪೊಲೀಸರು ಸತ್ಯ ಪರಿಶೀಲನೆ ಮಾಡದೆ ಎಫ್‌ಐಆರ್ ದಾಖಲು ಮಾಡಿದ್ದಾರೆ. ಕೇಂದ್ರ ಮಂತ್ರಿ ಮೇಲೆ ಕ್ರಮ ಕೈಗೊಳ್ಳಬೇಕಾದರೆ ಪ್ರಾಸಿಕ್ಯೂಷನ್ ಅಗತ್ಯವಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿಎಂ ಮುಡಾ ಸಂಕಷ್ಟದಿಂದ ಪಾರಾಗಲಿ ಎಂದು ದರ್ಗಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಾರ್ಥನೆ
ಚುನಾವಣಾ ಬಾಂಡ್‌ಗೆ ದುಡ್ಡು ಕೊಟ್ಟವರು ಯಾರೂ ದೂರು ಕೊಟ್ಟಿಲ್ಲ. ಕೇಂದ್ರ ಸರ್ಕಾರದಿಂದ ಅನ್ಯಾಯ ಆಗಿದೆ ಎಂದು ದೂರು ನೀಡಿದ್ದಾರಾ? ಟಾರ್ಗೆಟ್ ಮಾಡುತ್ತಿದ್ದಾರೆ ಅನ್ನೋದು ಇದರಿಂದ ಸ್ಪಷ್ಟವಾಯಿತು. ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಹೇಳಿದರು ಎಂದು ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ನಿರ್ಮಲಾ ಸೀತಾರಾಮನ್ ಇದರಿಂದ ಲಾಭ ಮಾಡಿಕೊಂಡಿದ್ದಾರಾ? ಚುನಾವಣಾ ಬಾಂಡ್ ಮೂಲಕ ಕಾಂಗ್ರೆಸ್ (Congress) ಪಕ್ಷಕ್ಕೂ ಹಣ ಹೋಗಿದೆ. ಬೇರೆ ಬೇರೆ ಪಕ್ಷಗಳಿಗೂ ಹಣ ಹೋಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 18 ವರ್ಷಗಳ ಬಳಿಕ ವಿರಾಜಪೇಟೆ ಪುರಸಭೆ ಅಧಿಕಾರ ಹಿಡಿದ ಕಾಂಗ್ರೆಸ್