Connect with us

Belgaum

ಗಾಂಜಾ ಮಾರಾಟ ಮಾಡ್ತಿದ್ದ 13 ಮಂದಿ ಅರೆಸ್ಟ್ – 27 ಕೆಜಿ ಜಪ್ತಿ

Published

on

ಬೆಳಗಾವಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 4 ಲಕ್ಷಕ್ಕೂ ಅಧಿಕ ಮೌಲ್ಯದ 27 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳಿಂದ 11 ಮೊಬೈಲ್, 1 ಕಾರು, 3 ಬೈಕ್, 15 ಸಾವಿರ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೆಳಗಾವಿ ಡಿಸಿಪಿ ಡಾ.ವಿಕ್ರಮ್ ಅಮಟೆ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬೆಳಗಾವಿ ಸಿಸಿಐಬಿ, ಮಾಳಮಾರುತಿ, ಎಪಿಎಂಸಿ ಪೊಲೀಸರು ಪ್ರತ್ಯೇಕ ದಾಳಿ ನಡೆಸಿದ್ದು, ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಿದ್ದಾರೆ.

ಖದೀಮರು ದ್ವಿ-ಚಕ್ರವಾಹನ, ಬೈಕ್‍ಗಳಲ್ಲಿ ಮಹಾರಾಷ್ಟ್ರದ ಮಿರಜ್‍ನಿಂದ ಗಾಂಜಾ ತಂದು ಬೆಳಗಾವಿಗೆ ಸಪ್ಲೈ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಮಹಾರಾಷ್ಟ್ರಕ್ಕೆ ತೆರಳಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆಯಾ ಠಾಣೆಯಲ್ಲಿ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *