ಬೆಳಗಾವಿ: ಬಡ್ಡಿಗೆ ಸಾಲ ಪಡೆದು ಜರ್ಮನಿಯಲ್ಲಿ (Germany) ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ (World Dwarf Games) ಭಾಗವಹಿಸಿದ್ದ ಬೆಳಗಾವಿಯ (Belagavi) ಯುವತಿ ಮೂರು ಪದಕ ಗೆದ್ದು ವಿಶೇಷ ಸಾಧನೆ ಮಾಡಿದ್ದಾರೆ.
ಹೌದು. ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಯುವತಿ ಮಂಜುಳಾ ಶಿವಾನಂದ ಗೊರಗುದ್ದಿ, ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಸಾಧನೆ ಮಾಡಿ ತೋರಿಸಿದ್ದಾರೆ. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ, ಚಕ್ರ ಎಸೆತದಲ್ಲಿ 2ನೇ ಸ್ಥಾನ ಪಡೆದು ಬೆಳ್ಳಿ ಪದಕ ಹಾಗೂ ಜಾವೆಲಿನ್ ಥ್ರೋದಲ್ಲಿ (Javelin Throw) 3ನೇ ಸ್ಥಾನ ಪಡೆದು ಕಂಚಿನ ಪದಕ ಬಾಚಿಕೊಂಡಿದ್ದಾರೆ. ಇದನ್ನೂ ಓದಿ: ಹೊಸ ಕೋಚ್ ನೇಮಿಸಿದ RCB – ಮುಂದಿನ ಸಲ ಕಪ್ ನಮ್ದೆ ಅಂತಿದ್ದಾರೆ ಫ್ಯಾನ್ಸ್
ಜುಲೈ 28ರಿಂದ ಆಗಸ್ಟ್ 4ರ ವರೆಗೆ ಆಯೋಜನೆಗೊಂಡಿದ್ದ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ತನ್ನ ಸಾಮರ್ಥ್ಯ ಸಾಬೀತು ಮಾಡಿರುವ ಮಂಜುಳಾ ಅವರು ಮೂರು ದಿನಗಳಲ್ಲಿ ಪದಕಗಳೊಂದಿಗೆ ತವರಿಗೆ ಮರಳಲಿದ್ದಾರೆ. ಸುಮಾರು 2.5 ಲಕ್ಷ ರೂ. ಹಣ ಹೊಂದಿಸಿ ದೂರದ ಜರ್ಮನಿಗೆ ಹೋಗಿದ್ದ ಮಂಜುಳಾ ಪದಕ ಗೆಲ್ಲುವ ತನ್ನ ಕನಸು-ನನಸು ಮಾಡಿಕೊಳ್ಳುವ ಮೂಲಕ ವಿದೇಶದಲ್ಲೂ ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚುವಂತೆ ಮಾಡಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಸೋಲಿಗೆ ಕಾರಣವಾಗಿದ್ದ ಇಂಗ್ಲೆಂಡ್ ಬ್ಯಾಟರ್ ನಿವೃತ್ತಿ ಘೋಷಣೆ
ಈ ಬಗ್ಗೆ ವೀಡಿಯೋದಲ್ಲಿ ಹೇಳಿಕೆ ನೀಡಿರುವ ಮಂಜುಳಾ, ವಿದೇಶಿ ನೆಲದಲ್ಲಿ ಮೂರು ಪದಕ ಗೆದ್ದಿರುವುದು ತುಂಬಾ ಖುಷಿ ಕೊಟ್ಟಿದೆ. ಈ ಪದಕಗಳನ್ನ ಭಾರತ ದೇಶಕ್ಕೆ ಮತ್ತು ನನ್ನ ತಾಯಿಗೆ ಅರ್ಪಿಸುತ್ತೇನೆ. ಮುಂದೆ ಇನ್ನೂ ಹೆಚ್ಚಿನ ಸಾಧನೆ ಮಾಡುವ ಹುಮ್ಮಸ್ಸು ನನಗೆ ಬಂದಿದೆ ಎಂದಿದ್ದಾರೆ.
ಒಟ್ಟಿನಲ್ಲಿ ಸಾಧಿಸುವ ಛಲವೊಂದಿದ್ದರೆ ಏನೂ ಬೇಕಾದ್ರೂ ಮಾಡಬಹುದು ಅನ್ನೋದಕ್ಕೆ ಮಂಜುಳಾ ಉದಾಹರಣೆಯಾಗಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]