ಬೆಳಗಾವಿ: ನಮ್ಮ ತಂದೆಗೆ ಬಿಪಿ, ಶುಗರ್ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಪೊಲೀಸರೇ ಸುಳ್ಳು ಕೇಸ್ (Police Case) ದಾಖಲಿಸಿದ್ದಾರೆ. ತಂದೆಯ ಕೈಗೆ ಹಗ್ಗಕಟ್ಟಿ, ಚಿತ್ರಹಿಂಸೆ ನೀಡಿದ್ದಾರೆ. ಆದ್ದರಿಂದಲೆ ತಂದೆ ಠಾಣೆಯಲ್ಲಿ ಮೃತಪಟ್ಟಿದ್ದಾರೆ ಎಂದು ಬಸನಗೌಡ ಪಾಟೀಲ್ ಪುತ್ರಿ ರೋಹಿಣಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
Advertisement
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ತಂದೆಯ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ. ನಮಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೇಶ ಕಾಯುವ ಯೋಧರಿಂದ್ಲೇ ನಾವು ಸುರಕ್ಷಿತ- ಮೃತ ಸೈನಿಕರ ಕುಟುಂಬಗಳಿಗೆ ಜೊಲ್ಲೆ ಸಾಂತ್ವನ
Advertisement
Advertisement
ನಿನ್ನೆ ನಮ್ಮ ತಂದೆಯನ್ನು ಕರೆದುಕೊಂಡು ಹೋಗಿದ್ದಾರೆ. ರಾತ್ರಿ ಫೋನ್ ಮಾಡಿ ತಕ್ಷಣ ಬನ್ನಿ ಎಂದು ಪೊಲೀಸರು (Belagavi Police) ಹೇಳಿದ್ರು. ರಾತ್ರಿ 10ಕ್ಕೆ ಬಂದು ನೋಡಿದಾಗ ತನ್ನ ತಂದೆ ಬೆಡ್ ಮೇಲೆ ಇದ್ರು. ವೈದ್ಯರು ಹೇಳಿದ್ರು ಇನ್ನೂ ಡೆತ್ ಆಗಿಲ್ಲ ಅಂದ್ರು. ನಾನು ಪ್ಯಾರಾಮೆಡಿಕಲ್ ವಿದ್ಯಾರ್ಥಿ (Paramedical Student) ಆಗಿದ್ದರಿಂದ ಕೈಹಿಡಿದು ಪಲ್ಸ್ ನೋಡಿದೆ, ಆಗ ಯಾವ ಪ್ರತಿಕ್ರಿಯೆಯೂ ಬರಲಿಲ್ಲ. ಆಮೇಲೆ ವೈದ್ಯರು ನಿಮ್ಮ ತಂದೆ ಇನ್ನಿಲ್ಲ ಅಂತಾ ಹೇಳಿರುವುದಾಗಿ ತಿಳಿಸಿದ್ದಾರೆ.
Advertisement
ಅಣ್ಣ-ನಾನು ಇನ್ನೂ ಓದಬೇಕು: ನಮ್ಮ ಕುಟುಂಬದ ದೀಪ ಆರಿಹೋಗಿದೆ. ನಾನು, ನಮ್ಮ ಅಣ್ಣ ಇನ್ನೂ ಓದಬೇಕು. ಕೇಸ್ ಇರೋ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಹೃದಯಾಘಾತವಂತು (HeartAttack) ಅಲ್ವೇ ಅಲ್ಲ. ಒಂದು ವೇಳೆ ಹೃದಯಾಘಾತ ಲಕ್ಷಣ ಕಂಡುಬಂದಿದ್ದರೆ ತಕ್ಷಣ ಆಸ್ಪತ್ರೆಗೆ (Hospital) ಸೇರಿಸಬೇಕಿತ್ತು. ಆದ್ರೆ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಇದಾದಬಳಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಬಗ್ಗೆ ನ್ಯಾಯಾಧೀಶರಿಗೆ ಹೇಳಿಕೆ ನೀಡಿದ್ದೇನೆ. ನಮ್ಮ ತಂದೆ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.