ಬೆಳಗಾವಿ: ಮನೆಯಲ್ಲಿ ಹೆಂಡತಿ (Wife) ಮಕ್ಕಳು (Children) ಮಲಗಿದ್ದಾಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು(Person) ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರದ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಫಿಶ್ ಮಾರ್ಕೆಟ್ (Fish Market) ಬಳಿಯ ಕ್ಯಾಂಪ್ ಪ್ರದೇಶದ ನಿವಾಸಿ ಸುಧೀರ್ ಕಾಂಬಳೆ(57) ಕೊಲೆಯಾದವರು. ಕೊಲೆಯಾದ ವ್ಯಕ್ತಿ ದುಬೈನಲ್ಲಿ (Dubai) ವಾಸವಾಗಿದ್ದರು. ಕೋವಿಡ್ (Covid) ಕಾರಣಕ್ಕೆ ಕಳೆದ ಎರಡು ವರ್ಷಗಳ ಹಿಂದಷ್ಟೇ ಬೆಳಗಾವಿಗೆ (Belgavi) ಬಂದು ನೆಲೆಸಿದರು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್
ಶುಕ್ರವಾರ ತಡರಾತ್ರಿ ಮನೆಗೆ ನುಗ್ಗಿದ ಹಂತಕರು ಹೆಂಡತಿ, ಮಕ್ಕಳು ಪಕ್ಕದ ರೂಮ್‍ನಲ್ಲಿ ಮಲಗಿದ್ದಾಗಲೇ ಯಾರಿಗೂ ಗೊತ್ತಾಗದಂತೆ ಬಂದಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಸುಧೀರ್ ಹೊಟ್ಟೆ, ಕತ್ತು, ಕೈ, ಮುಖಕ್ಕೆ ಇರಿದು ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕ್ಯಾಂಪ್ ಪೊಲೀಸರು, ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ಈಶ್ವರ ಖಂಡ್ರೆ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ