ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಗ್ಯಾಂಗ್ ರೇಪ್ (Belagavi Minor Gang Rape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 5 ಜನರನ್ನು ಬಂಧನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ತಿಳಿಸಿದ್ದಾರೆ.
ಘಟನೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ಬಹಳ ಹಿಂದೆ ನಡೆದಿದೆ. ಡಿಸೆಂಬರ್, ಜನವರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ಯಾರು ದೂರು ಕೊಟ್ಟಿರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಚೋದನಕಾರಿ ಭಾಷಣ – ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕೇಸ್ ದಾಖಲು
ಈಗ ದೂರು ನೀಡಿದ್ದು ದೂರು ಆಧರಿಸಿ ಈಗಾಗಲೇ ಐದು ಜನರನ್ನ ಬಂಧನ ಮಾಡಲಾಗಿದೆ. ಬೆಳಗಾವಿ ಕಮಿಷನರ್ಗೆ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಹ್ಲಿ ಮಾಲೀಕತ್ವದ ಬೆಂಗ್ಳೂರು ಪಬ್ ವಿರುದ್ಧ ಮತ್ತೊಂದು ಎಫ್ಐಆರ್
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿತ್ತು. ಆರಂಭದಲ್ಲಿ ಒಬ್ಬನು ಬಾಲಕಿಯನ್ನು ಪರಿಚಯಿಸಿಕೊಂಡು, ಸ್ನೇಹ ಬೆಳೆಸಿದ್ದ. ಬಳಿಕ ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದರು. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಬೊರಸೆ ಹೇಳಿದರು.