ಬೆಳಗಾವಿ: ಪ್ರಯಾಣಿಕರೊಬ್ಬರು ಬಸ್ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
Advertisement
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೊಠಡಿಗೆ ನುಗ್ಗಿದ ಪ್ರಯಾಣಿಕ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪವಿದೆ. ಮೊದಲಿಗೆ ಬಸ್ ವಿಚಾರಣೆಯ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿ ಮತ್ತು ಪ್ರಯಾಣಿಕನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಇಬ್ಬರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಸಿಧು ಮೂಸೆವಾಲಾ ಹತ್ಯಾ ಪ್ರಕರಣ – ದೆಹಲಿಯಲ್ಲಿ ಗುಂಡು ಹಾರಿಸಿದವನ ಬಂಧನ
Advertisement
Advertisement
ಈ ವೇಳೆ ಸ್ಥಳದಲ್ಲಿದ್ದ ಸಾರಿಗೆ ಇಲಾಖೆ ಸಿಬ್ಬಂದಿ ಸೇರಿಕೊಂಡು ಪ್ರಯಾಣಿಕನಿಗೆ ಥಳಿಸಿ ಕೊಠಡಿಯಲ್ಲಿ ಕೂಡಿ ಹಾಕಿ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಡಾಲಿ ಧನಂಜಯ್ ನಟನೆಯ ‘ಹೊಯ್ಸಳ’ನ ಆರ್ಭಟ