ಚಿಕ್ಕೋಡಿ: ಗೃಹಲಕ್ಷ್ಮಿ (GruhaLakshmi) ಯೋಜನೆ ಅರ್ಜಿ ನೋಂದಣಿಗೆ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಗ್ರಾಮ ಒನ್ (Grama One) ಕೇಂದ್ರದ ಲಾಗ್‍ಇನ್ ಐಡಿ ರದ್ದು ಪಡಿಸಿದ ಪ್ರಕರಣ ರಾಯಬಾಗದ ಚಿಂಚಲಿಯಲ್ಲಿ ನಡೆದಿದೆ. ಅಲ್ಲದೇ ಕೇಂದ್ರವನ್ನು ಸೀಜ್ ಮಾಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಸುಶೀಲಾ ಕಾಂಬಳೆ ಎಂಬುವವರ ಬಳಿ ಸಿಬ್ಬಂದಿ 100 ರೂ. ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕುಡುಚಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ (FIR) ದಾಖಲಾಗಿದೆ. ಗ್ರಾಮ ಒನ್ ಕೇಂದ್ರದ ಕಂಪ್ಯೂಟರ್ ಆಪರೇಟರ್ ಅಜೀತ್ ಇದ್ಲಿ ವಿರುದ್ಧ ಐಪಿಸಿ ಸೆಕ್ಷನ್ 1860 (406 ಹಾಗೂ 420) ರ ಅಡಿ ವಂಚನೆ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: Instagram ಪ್ರಿಯಕರನನ್ನ ಭೇಟಿಯಾಗಲು ಪಾಕಿಸ್ತಾನಕ್ಕೆ ಹೊರಟಿದ್ದ ರಾಜಸ್ಥಾನದ 16ರ ಹುಡುಗಿ ಅರೆಸ್ಟ್
Advertisement
Advertisement
ಗ್ರಾಮ ಒನ್ ಕೇಂದ್ರದ ಸಿಬ್ಬಂದಿ ವಿರುದ್ಧ ದೂರುಗಳು ಬಂದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ್ದ ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಇತರ ಸಿಬ್ಬಂದಿ ಭೇಟಿ ನೀಡಿದ್ದರು. ರಾಯಬಾಗ ಸಿಡಿಪಿಒ ಸಂತೋಷ ಕಾಂಬಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
Advertisement
Advertisement
ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅದರಂತೆ ಅರ್ಜಿ ಸಲ್ಲಿಸಲು ಫಲಾನುಭವಿಗಳಿಂದ ಯಾವುದೇ ಹಣ ಸ್ವೀಕರಿಸುವಂತಿಲ್ಲ ಎಂದು ಸರ್ಕಾರ ತಾಕೀತು ಮಾಡಿತ್ತು. ಆದರೆ ಕೆಲವು ಗ್ರಾಮ ಒನ್ ಕೇಂದ್ರಗಳಲ್ಲಿ ಹಣ ಪಡೆಯುತ್ತಿರುವ ಆರೋಪಗಳು ಕೇಳಿ ಬರುತ್ತಿದ್ದು ಸರ್ಕಾರ ಪರಿಶೀಲನೆಗೆ ಕ್ರಮಕೈಗೊಂಡಿದೆ. ಇದನ್ನೂ ಓದಿ: ಬೆಂಗ್ಳೂರಿನ 2 ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಪತ್ತೆ
Web Stories