ಬೆಳಗಾವಿ: ನಾವು ಮಾತನಾಡಿದರೆ ಬಲಾತ್ಕಾರ, ಅವರು ಮಾತನಾಡಿದರೆ ಚಮತ್ಕಾರ ಎಂದು ರಾಮನಗರದ (Ramangara) ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್(Iqbal Hussain) ಹೇಳಿದ್ದಾರೆ.
ಯತೀಂದ್ರ ಸಿದ್ದರಾಮಯ್ಯನವರ (Yathindra Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಏನಾದರೂ ಮಾತನಾಡಿದರೆ ನೋಟಿಸ್ ಕೊಡುತ್ತಾರೆ. ನಮ್ಮ ವರಿಷ್ಠರು ಅಷ್ಟು ವೀಕ್ ಇಲ್ಲ, ಬಲಿಷ್ಠವಾಗಿದೆ ಎಂದರು.
ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಯತೀಂದ್ರ ಹೇಳಿಕೆ ಹಿಂದೆ ಯಾರಿದ್ದಾರೆ ಗೊತ್ತಿಲ್ಲ. ಪದೇಪದೆ ಅವರು ನೀಡುವ ಹೇಳಿಕೆಯ ಬಗ್ಗೆ ಅವರನ್ನೇ ಕೇಳಬೇಕು . ನಮಗೆ ಹೇಳಿಕೆ ಕೊಡಬೇಡಿ ಎಂದಿದ್ದಾರೆ. ಹೀಗಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿರು. ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್ ಹೇಳಿದೆ: ಯತೀಂದ್ರ ಸಿದ್ದರಾಮಯ್ಯ

