ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Belagavi Session) ಸೋಮವಾರ (ಡಿ.4)ದಿಂದ ಆರಂಭವಾಗುತ್ತಿದ್ದು, ಬಿಗಿ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಧಿವೇಶನದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆಳಗಾವಿ ಆಗಮಿಸುತ್ತಿದ್ದಂತೆ ಮೇಯರ್ ಶೋಭಾ ಸೋಮನ್ನಾಚೆ, ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್ ಸೇರಿ ಹಲವರು ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: Cyclone Michaung- ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ
Advertisement
Advertisement
ಬೆಳಗಾವಿ ಜಿಲ್ಲೆಯಲ್ಲಿ ಸಾಲು ಸಾಲು ಪ್ರತಿಭಟನೆಗಳು ಹಮ್ಮಿಕೊಂಡಿರುವುದರಿಂದ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು (Belagavi Police) ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ನೇತೃತ್ವದಲ್ಲಿ ಭದ್ರತಾ ತಂಡವನ್ನು ನಿಯೋಜಿಸಲಾಗಿದೆ.
Advertisement
ಒಟ್ಟು 9 IPS ದರ್ಜೆ, 12 ಹೆಚ್ಚುವರಿ SP, 37 DYSP, 92 PI, 219 ಪಿಎಸ್‌ಐ, 366 ಎಎಸ್‌ಐ, 3 ಸಾವಿರ ಪೊಲೀಸ್ ಕಾನ್ಸ್ಟೇಬಲ್, 200 ಹೋಮ್ ಗಾರ್ಡ್ಸ್, 35 ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. 2 ಸಾವಿರ ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ ಸುವರ್ಣ ಸೌಧ ಸಮೀಪದಲ್ಲೇ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದ್ದು, ಕಾಟ್, ಬೆಡ್, ತಲೆದಿಂಬು, ಚಾರ್ಜಿಂಗ್ ಪಾಯಿಂಟ್, ಬಿಸಿ ನೀರು ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ.
Advertisement
ಇನ್ನೂ ಚಳಿಗಾಲದ ಅಧಿವೇಶನಕ್ಕೆ ಪ್ರತಿಯಾಗಿ ಅನುಮತಿ ನಿರಾಕರಣೆ ನಡುವೆಯೂ ಮಹಾಮೇಳಾವ್ ನಡೆಸಲು ಉದ್ದೇಶಿಸಿದ್ದ ಬೆಳಗಾವಿ ನಗರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಹಾಮೇಳಾವ್ ನಡೆಸಲು ನಿಗಧಿಯಾಗಿದ್ದ ಲೇಲೆ ಮೈದಾನದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಿಂದ 18 ಕಿಮೀ ದೂರದಲ್ಲಿರುವ ಮಹಾರಾಷ್ಟ್ರದ ಶಿನ್ನೋಳ್ಳಿ ಗ್ರಾಮದಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ನಿರ್ಧರಿಸಿದೆ. ಮಹಾರಾಷ್ಟ್ರದ ಶಿವಸೇನೆ, ಎನ್‌ಸಿಪಿ ಮುಖಂಡರು ಮಹಾಮೇಳಾವ್‌ದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸರ್ಕಾರಿ ಸಂಸ್ಥೆಗಳಿಂದಲೇ ಸಾವಿರಾರು ಕೋಟಿ ಕರೆಂಟ್ ಬಿಲ್ ಬಾಕಿ – BBMP ಮೇಲೆ ಬೆಸ್ಕಾಂ ಅಧಿಕಾರಿಗಳು ಗರಂ