ಚಿಕ್ಕೋಡಿ(ಬೆಳಗಾವಿ): ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಬಿಎಸ್ಎಫ್ ಯೋಧರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಸೂರಜ್ ಸುತಾರ್(32) ಅಪಘಾತದಲ್ಲಿ ಮೃತಪಟ್ಟ ಯೋಧರಗಿದ್ದಾರೆ. ಇವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ನಿವಾಸಿ. ಸೂರಜ್ ಅವರು ಕಳೆದ 10 ವರ್ಷದಿಂದ ಬಿಎಸ್ಎಫ್ ನಲ್ಲಿ ಸೇವೆ ಮಾಡುತ್ತಿದ್ದಾರೆ. ಸದ್ಯ ಪಶ್ಚಿಮ ಬಂಗಾಳದಲ್ಲಿ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಕಳೆದ ಎರಡು ವರ್ಷಗಳ ಹಿಂದೆಯಷ್ಟೆ ಸೂರಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸೋಮವಾರ ಆಟೋದಿಂದ ಇಳಿದು ರಸ್ತೆ ದಾಟುವಾಗ ಲಾರಿ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಲೆ ಮಾದಪ್ಪನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸ್ತಿದ್ದ ಅರ್ಚಕ ಸಾವು
ಯೋಧ ಸೂರಜ್ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ನಾಳೆ ಪಶ್ಚಿಮ ಬಂಗಾಳದಿಂದ ಸ್ವಗ್ರಾಮ ಯಡೂರುವಾಡಿಗೆ ಪಾರ್ಥಿವ ಶರೀರ ಬರಲಿದ್ದು, ಅಂತ್ಯಸಂಸ್ಕಾರ ನೆರವೇರಲಿದೆ.