ಬೆಳಗಾವಿ: ಪಂಜಾಬ್‍ನಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಹಾರಿದ ಗುಂಡು ತಗುಲಿ ಹುತಾತ್ಮನಾಗಿದ್ದ ಕರ್ನಾಟಕದ ಬೆಳಗಾವಿ ಮೂಲದ ಯೋಧ ಪ್ರವೀಣ ಪಟ್ಟಣಕುಡೆ (32) ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಯೋಧ ಪ್ರವೀಣ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರ ಗ್ರಾಮದವರಾಗಿದ್ದು, ಸ್ವಗ್ರಾಮ ಚಂದೂರಿಗೆ ಇಂದು ಬೆಳಗ್ಗೆ ಪಾರ್ಥಿವ ಶರೀರ ಆಗಮಿಸಿತ್ತು. ಮನೆ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮದ ಸಂಬಂಧಿಕರ ಜಮೀನಿನಲ್ಲಿ ಅಂತಿಮ ಕಾರ್ಯ ನಡೆದಿದ್ದು, ಯೋಧನ ಅಂತಿಮ ಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ದರ್ಶನ ಪಡೆದರು.
Advertisement
Advertisement
71 ಆಮ್ರ್ಡ್ ರೆಜಿಮೆಂಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಪ್ರವೀಣ್ ಅವರಿಗೆ ಮಾರ್ಚ್ 7 ರಂದು ಬುಲೆಟ್ ತಗುಲಿತ್ತು. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ 8ರ ತಡರಾತ್ರಿ ಚಿಕಿತ್ಸೆ ಫಲಕಾರಿಯಾದೇ ಹುತಾತ್ಮರಾಗಿದ್ದರು.
Advertisement
ಅಂತ್ಯಕ್ರಿಯೇಯ ವೇಳೆ ಸಂಸದ ಪ್ರಕಾಶ ಹುಕ್ಕೇರಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವರು ಭಾಗಿಯಾಗಿದ್ದರು.
Advertisement
ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv