ChikkamagaluruDistrictsLatestMain Post

ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ – ಡಿಕೆಶಿ ವಿರುದ್ಧ ಸಿ.ಟಿ.ರವಿ ಆಕ್ರೋಶ

ಚಿಕ್ಕಮಗಳೂರು: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ ಎಂದು ಕೈ ಪಕ್ಷ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಎಂಇಎಸ್ ಪುಂಡಾಟಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ. ಡಿಕೆಶಿ ಅವರೇ ಈ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ ಅನ್ನೋದು ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ತಲೆಕೂದಲು ತೆಗೆದ ಫೋಟೋ ಶೇರ್ ಮಾಡಿ ಶಾಕಿಂಗ್ ಸುದ್ದಿ ಕೊಟ್ಟ ಮೋಹಿನಿ ನಟಿ

ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಬೇಕಾದರೆ ಎಂಇಎಸ್ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದಿದ್ದರು. ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಅವರೇ. ಡಿ.ಕೆ ಶಿವಕುಮಾರ್, ಜಮೀರ್ ಅಹ್ಮದ್‌ರ ಕಟ್ಟಾ ಬೆಂಬಲಿಗರಿAದಲೇ ಈ ಕೃತ್ಯ ನಡೆದಿದೆ. ಸಂಗೊಳ್ಳಿ ರಾಯಣ್ಣ, ಬಸವೇಶ್ವರ ಪ್ರತಿಮೆಗೆ ಅಪಮಾನ ಕೂಡ ಕಾಂಗ್ರೆಸ್, ಎಂಇಎಸ್ ಕಾರ್ಯಕರ್ತರೇ ಮಾಡಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಉಡುಪಿಯ ಇಬ್ಬರಲ್ಲಿ ಓಮಿಕ್ರಾನ್ ವೈರಸ್ ಪತ್ತೆ

ಜಾತಿ ಸಂಘರ್ಷ ಭಾಷಾ ಸಂಘರ್ಷವನ್ನು ಹುಟ್ಟು ಹಾಕುವುದೇ ಇವರ ಉದ್ದೇಶವಾಗಿದೆ. ಹಾಗಾಗಿಯೇ ಎಂಇಎಸ್ ಸಂಘಟನೆಯನ್ನು ಕೆಪಿಸಿಸಿ ಅಧ್ಯಕ್ಷರು ಸಮರ್ಥನೆ ಮಾಡಿದ್ದಾರೆ. ಈ ಷಡ್ಯಂತ್ರವನ್ನು ಬಯಲಿಗೆಳೆಯಬೇಕೆಂದು ಸಿಎಂ, ಗೃಹ ಸಚಿವರನ್ನ ಆಗ್ರಹಿಸುತ್ತೇನೆ ಎಂದರು.

Leave a Reply

Your email address will not be published.

Back to top button