Belgaum
ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಬೆಳಗಾವಿ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.
ಮೃತ ಕುಟುಂಬಸ್ಥರನ್ನು ಸಾತಪ್ಪ ಸುತಾರ್(60), ಪತ್ನಿ ಮಹಾದೇವಿ(50) ಮಕ್ಕಳಾದ ದತ್ತಾತ್ರೇಯ (28), ಸಂತೋಷ್ (25) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೀರಡಿ ಗ್ರಾಮದವರಾಗಿದ್ದಾರೆ. ರೈಲಿಗೆ ತಲೆಕೊಟ್ಟು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಒಂದೇ ಕುಟುಂಬದ ದಂಪತಿ ಮತ್ತು ಮಕ್ಕಳು ಒಟ್ಟಿಗೆ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾರೆ. ರೈಲಿಗೆ ನಾಲ್ವರು ತಲೆ ಕೊಟ್ಟ ಪರಿಣಾಮ ದೇಹದ ಭಾಗಗಳು ಒಂದೊಂದು ಕಡೆ ಹೋಗಿ ಬಿದ್ದಿವೆ. ರೈಲು ಹಳಿಯ ಮೇಲೆ ನಾಲ್ವರ ದೇಹ ರಕ್ತ ಸಿಕ್ತವಾಗಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಮೃತದೇಹಗಳನ್ನ ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಾಲ್ವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.
