ಬೆಳಗಾವಿ: ಜಿಲ್ಲೆಯಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳನ್ನ ವೀಡಿಯೋ ರೆಕಾರ್ಡ್ ಮಾಡಿ. ಮತ್ತೆ ಹೆಂಡತಿಗೆ ಗಂಡನೇ ಬ್ಲ್ಯಾಕ್ ಮೇಲ್ (Blackmail) ಮಾಡಿರುವ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.
ಹೌದು. ಮತ್ತೊಂದು ಮದುವೆಗಾಗಿ ಹೆಂಡತಿಯಿಂದ ವಿಚ್ಛೇದನ ಪಡೆಯಲು ಬೆಳಗಾವಿ (Belagavi) ನಗರದ ನಿವಾಸಿ ಕಿರಣ್ ಪಾಟೀಲ್ ಎಂಬಾತ ಈ ರೀತಿ ಕೃತ್ಯ ಎಸಗಿದ್ದಾನೆ. ವಿಚ್ಛೇದನ (Divorce) ನೀಡು ಇಲ್ಲವಾದರೆ ಅಶ್ಲೀಲ ವೀಡಿಯೋ, ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಗಂಡನ ಮಾತನ್ನು ಕೇಳಿ ಹೆಂಡತಿ ಶಾಕ್ಗೆ ಒಳಗಾಗಿದ್ದಾರೆ. ಅಲ್ಲದೇ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದ್ರೂ ಯಾವುದೇ ಪ್ರಯೋಜನವಾಗಿಲ್ಲ.
Advertisement
Advertisement
ಇತ್ತ ವಿಚ್ಛೇದನ ಕೋರಿ ಗಂಡ ಕಿರಣ್ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಇನ್ನು ಕೋರ್ಟಿಗೆ ಹೋದ ಬಳಿಕವೂ ಹೆಂಡತಿಗೆ ನಿರಂತರವಾಗಿ ಕಿರಣ್ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಇದರಿಂದ ದಿಕ್ಕೆ ತೋಚದಾದ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ನೊಂದ ಮಹಿಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ
Advertisement
ಪ್ರಕರಣ ದಾಖಲಾದ ಬಳಿಕ ಠಾಣೆಗೆ ಕಿರಣ್ ಪಾಟೀಲ್ ನನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ನಲ್ಲಿ ಹೆಂಡತಿ ಅಶ್ಲೀಲ ವೀಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಅರೆಸ್ಟ್ ಮಾಡಲು ಮುಂದಾದಾಗ ತಪ್ಪಿಸಿಕೊಂಡು ಓಡಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ರಕ್ಷಣೆ ಮಾಡಿದ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಗುಣಮುಖನಾಗಿ ನಿನ್ನೆಯಷ್ಟೇ ಹಿಂಡಲಗಾ ಜೈಲಿಗೆ ಆರೋಪಿ ಕಿರಣ್ ನನ್ನು ರವಾನಿಸಲಾಗಿದೆ.