ಬೆಳಗಾವಿ: ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ (Belagavi Winter Session) ಆರಂಭ ಹಿನ್ನೆಲೆ ಮೊದಲ ದಿನವೇ ಹಲವು ಪ್ರತಿಭಟನೆಗಳು (Protest) ನಡೆಯಿತು. ಸುವರ್ಣಸೌಧದ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.
ಮಹದಾಯಿ ನೀರಿಗಾಗಿ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ರೈತರಿಂದ ಹೋರಾಟ ನಡೆಯಿತು. ಗದಗ- ಹರಪನಹಳ್ಳಿ ರೈಲ್ವೆ ಮಾರ್ಗಕ್ಕಾಗಿ ಮುಂಡರಗಿ ತಾಲೂಕು ಹೋರಾಟ ಸಮಿತಿಯಿಂದ ಧರಣಿ ನಡೆಸಲಾಯಿತು. ವಿಶೇಷ ಶಾಲೆಯ ಶಿಕ್ಷಕರ ಮತ್ತು ಶಿಕ್ಷಕೇತರರಿಗೆ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ, ರಾಜ್ಯ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ: ಶುಚಿ ಯೋಜನೆಗೆ ಮರು ಚಾಲನೆ – ಜನವರಿಯಿಂದ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್ ವಿತರಣೆ: ದಿನೇಶ್ ಗುಂಡೂರಾವ್
Advertisement
Advertisement
ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಶಿಕ್ಷಕರುಗಳು (Teacher) ಭಾಗಿಯಾಗಿದ್ದರು. ಶಿಶು ಕೇಂದ್ರೀಕೃತ ಯೋಜನೆಯಡಿ ಒಟ್ಟು 136 ಶಾಲೆಗಳಿವೆ ಇದರಲ್ಲಿ ಸಾವಿರಾರು ಜನ ಶಿಕ್ಷಕರರಿದ್ದಾರೆ. ಆದರೆ ಶಿಕ್ಷಕರಿಗೆ ಯಾವುದೇ ಸೇವಾ ಭದ್ರತೆ ಇಲ್ಲ, ಸರಿಯಾದ ಸಮಯಕ್ಕೆ ಸಂಬಳವಾಗುತ್ತಿಲ್ಲ, ಯಾವುದೇ ಸೌಲಭ್ಯಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ತಮ್ಮ ಅಸಮಾಧಾನ ಹೊರಹಾಕಿದರು.
Advertisement
ಪ್ರತಿಭಟನಾ ಸ್ಥಳಕ್ಕೆ ಸಚಿವ ಎಚ್ ಸಿ ಮಹಾದೇವಪ್ಪ ಭೇಟಿ ನೀಡಿ ಅಹವಾಲು ಸ್ವೀಕಾರ ಮಾಡಿದರು. ಕೂಡಲೇ ಸಂಬಂಧಿಸಿದ ಇಲಾಖೆಯ ಮುಖ್ಯಾಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಶಿಕ್ಷಕರಿಗೆ ಸೇವಾ ಭದ್ರತೆ ನೀಡಲು ಸೂಚನೆ ನೀಡುವ ಮೂಲಕ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.
Advertisement