ಬೆಂಗಳೂರು: ಡಿಸೆಂಬರ್ 2 ರಿಂದ 11 ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Winter Session) ನಡೆಯಲಿದೆ.
ಅಧಿವೇಶನ ಕುರಿತು ವಿಧಾನಸಭೆ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. 9 ದಿನಗಳ ಕಾಲ ನಡೆಯಲಿದ್ದು, ಶನಿವಾರವೂ ಕಲಾಪ ನಡೆಸಲು ಸರ್ಕಾರ ನಿರ್ಧರಿಸಿದೆ.
ಈ ಹಿಂದೆ ನ.30 ರಿಂದ ಡಿ.11 ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ನಿಶ್ಚಿಯಿಸಲಾಗಿತ್ತು. ಆದರೆ, ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆ ಅಧಿವೇಶನ ದಿನಾಂಕದಲ್ಲಿ ಬದಲಾವಣೆಯಾಗಿದೆ.
ಡಿ.2 ರಿಂದ 11 ರವರೆಗೆ ಅಧಿವೇಶನ ನಡೆಸಲು ಗುರುವಾರ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು.
