ಚಿಕ್ಕೋಡಿ: ಮದುವೆಯಾಗಿ (Marriage) ಹಲವು ವರ್ಷ ಕಳೆದರು ಮಕ್ಕಳಾಗಲಿಲ್ಲ ಎಂದು ಮನನೊಂದ ಮಹಿಳೆ (Woman) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ.
ಸುಧಾ ಸೋಮನಾಥ ವಾಜಂತ್ರಿ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಸುಧಾಗೆ ಮದುವೆಯಾಗಿ ಐದಾರು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಇದರಿಂದ ಮನನೊಂದಿದ್ದ ಸುಧಾ ಮಂಗಳವಾರ ಬೆಳಗಿನ ಜಾವ ಸೊಲ್ಲಾಪುರ ಗ್ರಾಮದ ಹೊರ ವಲಯದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಅಂಕೋಲಾ ಬಸ್ ನಿಲ್ದಾಣದಲ್ಲಿ ಕಸ ಸ್ವಚ್ಛ ಮಾಡಿದ ಹಾಲಕ್ಕಿ ಮಹಿಳೆಯನ್ನು ಹೊಗಳಿದ ಆನಂದ್ ಮಹೇಂದ್ರ
ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸ್ಕ್ರೂಡ್ರೈವರ್‌ನಲ್ಲಿ ಪತ್ನಿಯ ಕತ್ತು, ಎದೆಗೆ ಚುಚ್ಚಿ ಕೊಲೆಗೆ ಮುಂದಾದ ಪತಿ!