ಯಾದಗಿರಿ: ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶವನ್ನು ಪಡೆಯುದಕ್ಕೆ ಹಿಂದೇಟು ಹಾಕುತ್ತಿದ್ದರು. ಮನೆಯಿಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜಿಗೆ ಬಂದರೆ ಶೌಚಾಲವಿಲ್ಲದೆ ಪರಿತಪ್ಪಿಸುವಂತಾಗಿತ್ತು. ಬೆಳಕು ಕಾರ್ಯಕ್ರಮದ ಮೂಲಕ ಗ್ರಾಮೀಣ ಭಾಗದ ಕಾಲೇಜಿನ ವ್ಯವಸ್ಥೆ ಬಗ್ಗೆ ಸ್ವವಿಸ್ತಾರವಾಗಿ ವರದಿ ಬಿತ್ತರಿಸಿದ ಬಳಿಕ ಈಗ ಯಾದಗಿರಿ ಜಿಲ್ಲೆಯಲ್ಲಿರುವ ಗ್ರಾಮೀಣ ಭಾಗದ ಶಾಲಾ, ಕಾಲೇಜುಗಳಲ್ಲಿ ಜಿಲ್ಲಾಧಿಕರಿಗಳಿಗೆ ಬೆಳಕು ಚೆಲ್ಲಿದ್ದಾರೆ.
ಯಾದಗಿರಿ ತಾಲೂಕಿನ ಯರಗೋಳ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ಇಲ್ಲದೇ ವಿದ್ಯಾರ್ಥಿನಿಯರು ಮುಜುಗರಕ್ಕೆ ಒಳಗಾಗಿದ್ದರು. ವಿದ್ಯಾರ್ಥಿನಿಯರು ಶಿಕ್ಷಣವೇ ಬೇಡವೆಂದು ಕಾಲೇಜು ಬಿಡಲು ಮುಂದಾಗಿದ್ದರು. ಗ್ರಾಮೀಣ ವಿದ್ಯಾರ್ಥಿನಿಯರು ಶೌಚಾಲಯ ಸಮಸ್ಯೆಯನ್ನು ಬೆಳಕು ಕಾರ್ಯಕ್ರಮದ ಮೂಲಕ ಬಗೆಹರಿಸುವಂತೆ ಆಳಲು ತೋಡಿಕೊಂಡಿದ್ದರು. ಈ ವೇಳೆ ಬೆಳಕು ಕಾರ್ಯಕ್ರಮದ ಮೂಲಕ ಜಿಲ್ಲಾಧಿಕಾರಿ ಮಂಜುನಾಥ್ ಜೆ ಅವರೊಂದಿಗೆ ಮಾತಾಡಿ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿತ್ತು.
ಪಬ್ಲಿಕ್ ಟಿವಿ ವರದಿಗೆ ಜಿಲ್ಲಾಧಿಕಾರಿ ಮಂಜುನಾಥ ಅವರು ತಕ್ಷಣವೇ ಸ್ಪಂದಿಸಿ ನಿರ್ಮಿತಿ ಕೇಂದ್ರ ಅನುದಾನ ಮೂಲಕ ಅಗತ್ಯ ಶೌಚಾಲಯಗಳನ್ನ ನಿರ್ಮಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿ ಕಾಲೇಜು ಬಿಡುವ ಯೋಚನೆಯಿಂದ ದೂರ ಉಳಿದು ವಿದ್ಯಾರ್ಥಿಗಳು ಸಂತಸ ಗೊಂಡಿದ್ದಾರೆ.
ವಿಶೇಷ ಅಂದರೆ ಬೆಳಕು ಕಾರ್ಯಕ್ರಮದ ಮೂಲಕ ಜಿಲ್ಲಾಧಿಕಾರಿ ಮಂಜುನಾಥ್ ಎಚ್ಚೆತ್ತು ಕಾಲೇಜುಗಳಲ್ಲಿ ಶೌಚಾಲಯ ಇಲ್ಲದ ಅನೇಕ ಶಾಲಾ-ಕಾಲೇಜುಗಳಲ್ಲಿ ಮೂಲಸೌಕರ್ಯ ಒದಗಿಸುವಲ್ಲಿ ಅಂತರಿಕ್ಸ ಕಾಪ್ರೋಷನ್ ಸಂಸ್ಥೆಗೆ ಶೌಚಾಲಯ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ ಯಶಸ್ವಿಯಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ 187 ಶೌಚಾಲಯ, 206 ವಿದ್ಯಾರ್ಥಿನಿಯರ ಶೌಚಾಲಯ ಹಾಗೂ 76 ಕೋಣೆಗಳು ಹಾಗೂ ಅದರ ಜೊತೆ ಆಸ್ಪತ್ರೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಮುಂದಾಗಿರೋದು ನಿಜಕ್ಕೂ ಬೆಳಕು ಕಾರ್ಯಕ್ರಮದ ನಿಸ್ವಾರ್ಥ ಸೇವೆಗೆ ತಂದ ಫಲ ಎಂದು ಹೇಳಲು ಹರ್ಷಿಸುತ್ತೇವೆ. ಸ್ವಾರ್ಥ ರಹಿತ ಪ್ರಯತ್ನಕ್ಕೆ ಅಂದು ಕೊಂಡದ್ದಕ್ಕಿಂತ ಹೆಚ್ಚು ಫಲ ಸಿಗುತ್ತೆ ಎಂಬುದಕ್ಕೆ ಈ ನಿದರ್ಶನವೇ ಸಾಕ್ಷಿ. ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರ ಕಾರ್ಯ ಹೀಗೆ ಮುಂದುವರಿಯಲಿ ಎಂಬುದು ನಮ್ಮ ಆಶಯ.
https://www.youtube.com/watch?v=e4iAa8QmMvs