ಬೆಳಗಾವಿ: ನಿರ್ದಿಷ್ಟ ಪಕ್ಷ ಹಾಗೂ ಸಮುದಾಯವನ್ನು ಗುರುತಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‍ನ ಕಾರ್ಯಕರ್ತರು ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮನಬಂದಂತೆ ಮಾತನಾಡಿದ್ದಾರೆ. ಇತ್ತೀಚಿಗೆ ಸಿಎಎ ಬೆಂಬಲಿಸಿ ನಡೆಸಿದ ಜಾಗೃತಿ ಸಭೆಯಲ್ಲಿ ನಿರ್ದಿಷ್ಟ ಸಮುದಾಯನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ. ದೇಶ ಒಂದೇ ಜಾತಿ, ಭಾಷೆಗೆ ಸಿಮಿತವಾಗಿಲ್ಲ. ಸಾರ್ವಜನಿಕ ಸಭೆಯಲ್ಲಿ ಈ ರೀತಿ ಹೇಳಿರುವುದು ಸರಿಯಲ್ಲ. ಇದು ಸಮಾಜದ ಶಾಂತಿ ಹಾಳು ಮಾಡುವಂತೆ ಹೇಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ದೇಶದಲ್ಲಿ ಎಲ್ಲ ಧರ್ಮದವರು ಸಹೋದರರಂತೆ ಬಾಳುತ್ತಿದ್ದಾರೆ. ಆದರೆ ಶಾಸಕ ಸೋಮಶೇಖರ್ ರೆಡ್ಡಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದ ಶಾಂತಿ ಕದಡಲು ಯತ್ನಿಸಿದ್ದಾರೆ. ಅವರ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಜಿಲ್ಲಾ ಘಟಕದ ಅಧ್ಯಕ್ಷ ಸಲೀಂ ಖತಿಬ್, ರಸುಲ್ ಮುಲ್ಲಾ, ಎಂ.ಎಂ.ಅತ್ತಾರ, ಎಂ.ಬಿ.ಜಮಾದಾರ, ಪರಶುರಾಮ ವಗ್ಗಣ್ಣನವರ, ಗಜಾನನ ಧರನಾಯಕ ಹಾಗೂ ಇತರರು ಇದ್ದರು.