ಬೆಳಗಾವಿ: ಸಂಸದ ತೇಜಸ್ವಿ ಸೂರ್ಯ ರಾಕ್ಷಸ, ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.
ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ 14 ನೇಯ ಹಣಕಾಸು ಯೋಜನೆಯಲ್ಲಿ ಎಲ್ಲ ರಾಜ್ಯ ಸರ್ಕಾರಗಳಿಗೆ ನೆರವು ನೀಡಲೇಬೆಕು ಎಂದು ಹೇಳಿದರು.
Advertisement
Advertisement
ಮಾನವೀಯತೆಯ ಆಧಾರದ ಮೇಲೆ ಪ್ರಧಾನಿ ಮೋದಿ ರಷ್ಯಾಕ್ಕೆ ಹಣ ನೀಡುತ್ತಾರೆ. ಆದರೆ ನಮ್ಮ ರಾಜ್ಯ ಕರ್ನಾಟಕಕ್ಕೆ ಯಾಕೆ ಪರಿಹಾರ ನೀಡುತ್ತಿಲ್ಲ. ರಾಜ್ಯ ಮತ್ತು ಕೇಂದ್ರದಲ್ಲಿ ನಮ್ಮದೇ ಸರ್ಕಾರವಿದೆ. ನಾವು ರಾಜ್ಯವನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ ಹಿಂಬದಿಯಿಂದ ಬಿಜೆಪಿ ನಾಯಕರು ಅಧಿಕಾರಕ್ಕೆ ಬಂದರು. ಆದರೆ ನೆರೆ ಬಂದು 50 ದಿನ ಕಳೆದರೂ ಪರಿಹಾರ ಬಂದಿಲ್ಲ. ರಾಜ್ಯ ಬಿಜೆಪಿ ನಾಯಕರು ಎಲ್ಲಿದ್ದೀರಪ್ಪ ಎಂದು ವ್ಯಂಗ್ಯವಾಡಿದರು. ಇದನ್ನು ಓದಿ: ತೇಜಸ್ವಿ ಸೂರ್ಯ ತಕ್ಷಣ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು: ಹೆಚ್‍ಕೆ ಪಾಟೀಲ್
Advertisement
ಕೇಂದ್ರ ಸಚಿವರು, ನಮ್ಮ ಸಿಎಂ ಯಡಿಯೂರಪ್ಪ ಅವರಿಗೆ ಭೇಟಿಯಾಗಲೂ ಸಮಯ ನೀಡುತ್ತಿಲ್ಲ. ಈ ಅಭಿವೃದ್ಧಿ ಮಾಡಲು 25 ಸಂಸದರು ಬೇರೆ ಕೇಡು. ಇವತ್ತಿನ ಪ್ರತಿಭಟನೆಯನ್ನು ನೋಡಿ ಮೋದಿ ಸರ್ಕಾರ ಕೂಡಲೇ ಪರಿಹಾರ ಕೊಡಬೇಕು ಎಂದು ಒತ್ತಾಯ ಮಾಡಿದರು.