ಚಿಕ್ಕೋಡಿ(ಬೆಳಗಾವಿ): ಗ್ರಾಮ ಪಂಚಾಯ್ತಿ ಚುನಾವಣೆ ವೈಷಮ್ಯ ಹಿನ್ನೆಲೆ ಶಾಸಕ ಸತೀಶ್ ಜಾರಕಿಹೊಳಿ ಆಪ್ತ ಕಾರ್ಯದರ್ಶಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಫೈರಿಂಗ್ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಅಪರಿಚಿತ ವ್ಯಕ್ತಿಯಿಂದ ಇಬ್ಬರ ಮೇಲೆ ಫೈರಿಂಗ್ ನಡೆದಿದೆ. ಗ್ರಾಮ ಪಂಚಾಯ್ತಿ ಚುನಾವಣೆ ವೈಷಮ್ಯ ಹಿನ್ನೆಲೆ ಫೈರಿಂಗ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶಾಸಕರ ಆಪ್ತ ಕಾರ್ಯದರ್ಶಿ ಕಿರಣ್ ರಜಪೂತ್ ಹಾಗೂ ಕಾಂಗ್ರೆಸ್ ಮುಖಂಡ ಭರಮಾ ದೂಪದಾಳೆ ಎಂಬವರ ಮೇಲೆ ಅಪರಿಚಿತ ವ್ಯಕ್ತಿ ಫೈರಿಂಗ್ ನಡೆಸಿದ್ದಾನೆ. ಸತೀಶ್ ಜಾರಕಿಹೊಳಿ ಆಪ್ತ ಕಿರಣ್ ರಜಪೂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೋರ್ವ ಕಾಂಗ್ರೆಸ್ ಮುಖಂಡ ಭರಮಾ ದೂಪದಾಳಗೆ ಗಾಯವಾಗಿದೆ.
ಮಾಸ್ಕ್ ಹಾಕಿಕೊಂಡು 7 ಅಡಿ ಅಂತರದಿಂದ ಫೈರಿಂಗ್ ಮಾಡಿದ ಅಪರಿಚಿತ ಯಾವ ವೆಪನ್ ಬಳಸಿ ಫೈರಿಂಗ್ ಮಾಡಿದ್ದಾರೆ ಎನ್ನುವ ತನಿಖೆಯನ್ನ ಪೊಲೀಸರು ಮಾಡುತ್ತಿದ್ದಾರೆ. ಸ್ಥಳಕ್ಕೆ ಹುಕ್ಕೇರಿ ಸಿಪಿಐ ಗುರುರಾಜ ಕಲ್ಯಾಣ ಶೆಟ್ಟಿ ಹಾಗೂ ಪಿಎಸ್‍ಐ ರಮೇಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.