ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ಆದರೆ ಜಿಲ್ಲೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಹೊಂದಾಣಿಕೆ ಕಾಣಿಸತ್ತಿಲ್ಲ. ಸದ್ಯ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ನಡುವೆ ಎಲ್ಲವೂ ಸರಿ ಇಲ್ಲಾ ಅನ್ನುತ್ತಿದ್ದರೆ. ಇತ್ತ ಆ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಆರಂಭವಾಗಿದೆ.
Advertisement
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಗದ್ದುಗೆ ಹಿಡಿಯಲು 2 ಪಕ್ಷಗಳ ನಡುವೆ ತೀವ್ರ ಪೈಪೋಟಿ ಶುರುವಾಗಿದೆ. ಒಂದು ಬಾರಿಯಾದರೂ ಅಧ್ಯಕ್ಷ ಗಾದಿ ಏರಲು ಜೆಡಿಎಸ್ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ರೆ, ಇತ್ತ ಕಾಂಗ್ರೆಸ್ ಕೂಡ ಶತಾಯಗತಾಯ ಪಟ್ಟಕ್ಕೇರಲು ಪ್ರಯತ್ನ ಮಾಡುತ್ತಿದೆ. ಈ ಹಿಂದೆ ಅಧ್ಯಕ್ಷರಿದ್ದ ಮಾಜಿ ಶಾಸಕ ಫಿರೋಜ್ ಸೇಠ್ ಹಾಗೂ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ವಿನಯ್ ನಾವದಗಟ್ಟಿ ಸೇರಿದಂತೆ ಹಲವರು ಕಾಂಗ್ರೆಸ್‍ನಿಂದ ರೇಸ್‍ನಲ್ಲಿದ್ದಾರೆ.
Advertisement
ಈ ಸ್ಪರ್ಧೆ ಮಧ್ಯೆನೇ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಜೆಡಿಎಸ್‍ನವರಿಗೆ ಸ್ಥಾನ ಬಿಟ್ಟು ಕೊಡುವ ಚಿಂತನೆಯಲ್ಲಿದ್ದಾರೆ. ಈ ಮೂಲಕ ತನ್ನ ಆಪ್ತ ಶಿವನಗೌಡ ಪಾಟೀಲ್‍ನ ಕೂರಿಸಿ ಬೂಡಾ [Belgaum Urban Development Authority(BUDA)]ವನ್ನ ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.
Advertisement
Advertisement
ಜೆಡಿಎಸ್‍ನಲ್ಲಿ ಶಿವನಗೌಡ ಜತೆಗೆ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ಹಾಗೂ ಯೂಥ್ ವರ್ಕಿಂಗ್ ಜಿಲ್ಲಾಧ್ಯಕ್ಷ ಯೂಸುಫ್ ಅಥಣಿ ಕೂಡ ದೊಡ್ಡ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. ಇನ್ನೂ ಹಲವರು ಜೆಡಿಎಸ್ ವರಿಷ್ಠ ದೇವೇಗೌಡರ ಮೂಲಕ ಅಧ್ಯಕ್ಷಗಾದಿಗೇರುವ ಕನಸು ಕಾಣುತ್ತಿದ್ದಾರೆ. ವಿನಯ್ ನಾವದಗಟ್ಟಿ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರ ಸಪೋರ್ಟ್ ಮೂಲಕ ಸ್ಥಾನ ಗಿಟ್ಟಿಸಿಕೊಳ್ಳು ಪ್ರಯತ್ನ ನಡೆಸಿದ್ದಾರೆ.
ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿನ ಲೇಔಟ್‍ನ್ನು ಹಂಚಿ ಆ ಕ್ರೆಡಿಟ್‍ನ್ನು ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ತಮ್ಮ ಆಪ್ತರ ಮೂಲಕ ಗಳಿಸುವ ಕೆಲಸ ಮಾಡುತ್ತಿದ್ದಾರೆ ಎಂಬ ಮಾತುಗಳು ಬೆಳಗಾವಿ ರಾಜಕಾರಣದಲ್ಲಿ ಕೇಳಿ ಬರುತ್ತಿವೆ.