ಬೆಳಗಾವಿ: ದೇಶದಲ್ಲೇ ಇದೆ ಮೊದಲ ಬಾರಿಗೆ ನಡೆಯಲಿರುವ ಮಹಿಳಾ ಸೇನಾ ಭರ್ತಿ ರ‍್ಯಾಲಿಗೆ ಇಂದು ಬೆಳಗಾವಿಯ ಎಂಎಲ್‍ಐಆರ್ ಸಿ ಕೇಂದ್ರದ ಶಿವಾಜಿ ಮೈದಾನದಲ್ಲಿ ಚಾಲನೆ ನೀಡಲಾಗಿದೆ.
ಇಂದಿನಿಂದ ಐದು ದಿನಗಳ ಕಾಲ ರಾಜ್ಯದ ಏಕೈಕ ಸೈನಿಕ ತರಬೇತಿ ಕೇಂದ್ರ ಮರಾಠಾ ಲಘು ಪದಾತಿದಳದಿಂದ ಮಹಿಳಾ ಸೇನಾ ಭರ್ತಿ ಕಾರ್ಯ ನಡೆಯಲಿದೆ. ಈ ಸೇನಾ ಭರ್ತಿಗೆ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಮತ್ತು ತೆಲಂಗಾಣ ರಾಜ್ಯದಿಂದ ಅಭ್ಯರ್ಥಿಗಳು ಆಗಮಿಸಿದ್ದಾರೆ. ಇದರ ಜೊತೆಗೆ ಈ ಸೇನಾ ಭರ್ತಿ ರ‍್ಯಾಲಿಯಲ್ಲಿ ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಅಭ್ಯರ್ಥಿಗಳು ಭಾಗಿಯಾಗಿದ್ದಾರೆ.
Advertisement
Advertisement
ಈ ಹಿಂದೆ ಸೇನಾ ಭರ್ತಿ ರ‍್ಯಾಲಿಗೆ 15 ಸಾವಿರ ಅಭ್ಯರ್ಥಿಗಳು ಅರ್ಜಿ ಹಾಕಿದ್ದರು. ಈ ಪೈಕಿ ಮೆರಿಟ್ ಮೇಲೆ 3 ಸಾವಿರ ಅಭ್ಯರ್ಥಿಗಳ ಆಯ್ಕೆ ಮಾಡಿ ಇಂದಿನಿಂದ ನೇಮಕಾತಿ ವಿಭಾಗದ ಉಪ ಮಹಾನಿರ್ದೇಶಕ ದೀಪೇಂದ್ರ ರಾವತ್ ನೇತೃತ್ವದಲ್ಲಿ ದೈಹಿಕ ಪರೀಕ್ಷೆ ಮಾಡಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ.