ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿರುವುದು ದೃಢ

Public TV
2 Min Read
Mehul Choksi 2

ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi) ತನ್ನ ದೇಶದಲ್ಲಿರುವುದಾಗಿ ಯೂರೋಪಿಯನ್‌ ದೇಶವಾದ ಬೆಲ್ಜಿಯಂ (Belgium) ಖಚಿತಪಡಿಸಿದೆ ಎಂದು ವರದಿಯಾಗಿದೆ.

ಸಂದರ್ಶನವೊಂದರಲ್ಲಿ ಮಾತನಾಡುವಾಗ ಬೆಲ್ಜಿಯಂ ವಿದೇಶಾಂಗ ಸಚಿವಾಲಯವು ಅವರ ಉಪಸ್ಥಿತಿಯನ್ನು ಖಚಿತಪಡಿಸಿದೆ. ಆದಾಗ್ಯೂ ಅವರ ವೈಯಕ್ತಿಕ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದ್ರೆ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ತಮ್ಮ ಸಹವರ್ತಿಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿಕೊಂಡಿದೆ.

Mehul Choksi 1

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ.

ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

Mehul Choksi

65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ʻಎಫ್- ರೆಸಿಡೆನ್ಸಿʼ ಪೌರತ್ವ ಕಾರ್ಡ್ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದಾರೆ. ಅವರ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್ ಚಿಕಿತ್ಸೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳುವ ಪ್ಲ್ಯಾನ್‌ನಲ್ಲಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದರು. ಇದನ್ನೂ ಓದಿ: ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

Share This Article