ಮಾಸ್ಕೋ: ರಷ್ಯಾದ (Russia) ಮಿಲಿಟರಿ (Military) ತರಬೇತಿ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ 11 ಮಂದಿ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉಕ್ರೇನ್ ಗಡಿಯಲ್ಲಿರುವ ಬೆಲ್ಗೊರೊಡ್ ಪ್ರದೇಶದಲ್ಲಿ ನಡೆದಿದೆ.
ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಸಿಐಎಸ್ ದೇಶದ ಇಬ್ಬರು ಬಾಲ್ಗೊರೊಡ್ ಪ್ರದೇಶದ ಪಶ್ಚಿಮ ಮಿಲಿಟರಿ ಜಿಲ್ಲೆಯ ತರಬೇತಿ ಕೇಂದ್ರದಲ್ಲಿ ಈ ಕೃತ್ಯವನ್ನು ಎಸಗಿದ್ದಾರೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. ಉಕ್ರೇನ್ ಮೇಲೆ ದಾಳಿ ನಡೆಸಲು ಸ್ವಯಂಸೇವಕರಿಗೆ ತರಬೇತಿ ನೀಡುತ್ತಿದ್ದ ಅವಧಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: 10ರ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ
ಈ ಬಗ್ಗೆ ರಷ್ಯಾದ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ತರಬೇತಿ ಸಮಯದಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಎರಡು ಕಡೆಯಿಂದ ದಾಳಿ ಪ್ರತಿದಾಳಿ ನಡೆದಿದ್ದು, 11 ಮಂದಿ ಮೃತಪಟ್ಟಿದ್ದಾರೆ ಜೊತೆಗೆ ಘಟನೆಯಲ್ಲಿ ಇಬ್ಬರು ನಾಗರಿಕರನ್ನು ಸೇನೆ ಹತ್ಯೆ ಮಾಡಿದೆ ಎಂದು ತಿಳಿಸಿದೆ. ಇದನ್ನೂ ಓದಿ: ನಿಲ್ಲಿ, ಎಲ್ಲಿಗೆ ಹೋಗ್ತಿದ್ದೀರಾ ಅಂದಿದ್ದಕ್ಕೆ ಸೆಕ್ಯೂರಿಟಿಗಾರ್ಡ್‍ಗೆ ಹಿಗ್ಗಾಮುಗ್ಗ ಹೊಡೆದ