ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ

Public TV
1 Min Read
Arvind Bellad

ಹುಬ್ಬಳ್ಳಿ/ಧಾರವಾಡ: ಅಪರಿಚಿತ ಹಾಗೂ ಅನುಮಾನಾಸ್ಪದವಾಗಿ ಬೇರೆ ದೇಶದ ವ್ಯಕ್ತಿಗಳು ಹುಬ್ಬಳ್ಳಿ-ಧಾರವಾಡ (Hubballi-Dharwad) ಮಹಾನಗರದ ಕೆಲ ಮಸೀದಿಗಳಲ್ಲಿ ಓಡಾಟ ನಡೆಸುತ್ತಿದ್ದು, ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಶಾಸಕ ಅರವಿಂದ್ ಬೆಲ್ಲದ್ (Aravind Bellad) ಪತ್ರ ಬರೆದಿದ್ದಾರೆ.

ಅಪರಿಚಿತರ ಓಡಾಟ ಪರಿಶೀಲಿಸುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಬೆಲ್ಲದ್ ಪತ್ರ ಬರೆದಿದ್ದಾರೆ. ಮೇ 17ರಂದು ಬೆಲ್ಲದ್ ಪತ್ರ ಬರೆದಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಬೇಕಾ, ನರಕ ಬೇಕಾ ಅಂತ ಕೇಳಿದ್ರೆ ನಾನು ನರಕವನ್ನೇ ಆಯ್ಕೆ ಮಾಡ್ತೀನಿ: ಜಾವೇದ್‌ ಅಖ್ತರ್‌

HBL ARAVIND BELLAD AV

ಹೀಗೆ ಓಡಾಡುತ್ತಿರುವವರಲ್ಲಿ ಹೊಸ ಮುಖ, ಅಪರಿಚಿತ, ಅನುಮಾನಾಸ್ಪದ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ. ಅವಳಿ ನಗರದ ವಿವಿಧ ಕೊಳಚೆ ಪ್ರದೇಶದಲ್ಲಿ (ಜನ್ನತ್ ನಗರ ಧಾರವಾಡ ಸೇರಿದಂತೆ) ವಾಸವಾಗಿದ್ದಾರೆಂಬ ಮಾಹಿತಿಯೂ ಇದೆ. ಅದಕ್ಕಾಗಿ ಈ ಕುರಿತು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 8 ಮಂದಿ ಸಜೀವ ದಹನ

ಅವಳಿ ನಗರದಲ್ಲಿರುವ ಅಪರಿಚಿತ, ಹೊಸಮುಖದ ವ್ಯಕ್ತಿಗಳನ್ನು ವಿಚಾರಿಸಿ ಸೂಕ್ತ ಕ್ರಮ ಜರುಗಿಸಬೇಕು. ಇದರಿಂದ ಮಹಾನಗರದಲ್ಲಿ ಅಹಿತಕರ ಘಟನೆ ಆಗದಂತೆ ತಡೆಯುವ ಕೆಲಸ ಮಾಡಬೇಕೆಂದು ಶಾಸಕ ಬೆಲ್ಲದ್ ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂನಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ – ನಿಷೇಧವಿದ್ದರೂ ಖಾಸಗಿ ಕಾರ್ಯಕ್ಕೆ ಬಳಸಿಕೊಂಡು ನಿಯಮ ಉಲ್ಲಂಘನೆ

Share This Article