ನವದೆಹಲಿ : ಬೆಳ್ಳಂದೂರು ಕರೆ ಮಾಲಿನ್ಯ ಪ್ರಕರಣದಲ್ಲಿ ತಮ್ಮನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ರಾಜ್ಯಸಭಾ ಸಂಸದ ಕುಪೇಂದ್ರ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರ ಸೇರಿ ಒಂಬತ್ತು ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.
ಇಂದು ಸಿಜೆಐ ಎಸ್.ಎ ಬೋಬ್ಡೆ ನೇತೃತ್ವದ ತ್ರಿ ಸದಸ್ಯ ಪೀಠ ಮುಂದೆ ವಾದ ಮಂಡಿಸಿದ ವಕೀಲ ರಾಮ್ ಪ್ರಸಾದ್, ರಾಷ್ಟ್ರೀಯ ಹಸಿರು ನ್ಯಾಯಧೀಕರಣದಲ್ಲಿ ಮೊದಲು ಅರ್ಜಿ ಸಲ್ಲಿಸಿದ್ದು ನಮ್ಮ ಕಕ್ಷಿದಾರರು ಬಳಿಕ ಎನ್ ಜಿಟಿ ಸ್ವಯಂ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಅಲ್ಲದೇ ಎನ್ ಜಿಟಿ ದಾಖಲಿಸಿರುವ ಸ್ವಯಂ ದೂರಿನಲ್ಲೆ ನಮ್ಮ ಅರ್ಜಿಯನ್ನು ಸೇರ್ಪಡೆ ಮಾಡಿಕೊಂಡು ವಿಚಾರಣೆ ನಡೆಸುತ್ತಿದೆ. ಆದರೆ ನಮ್ಮ ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಬೇಕು ಎಂದು ಮನವಿ ಮಾಡಿದರು.
Advertisement
Advertisement
Advertisement
ವಿಚಾರಣೆ ಆಲಿಸಿದ ಪೀಠ ರಾಜ್ಯ ಸರ್ಕಾರ, ಬಿಡಿಎ, ತಮಿಳುನಾಡು ಸರ್ಕಾರ, ಕೇಂದ್ರ ಪರಿಸರ ಇಲಾಖೆ, ಬಿಬಿಎಂಪಿ, ಪರಿಸರ ನಿಯಂತ್ರಣ ಮಂಡಳಿ ಸೇರಿ 9 ಇಲಾಖೆಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.