ಬಳ್ಳಾರಿ: ನಗರದ ಪ್ಯೂಪಲ್ಸ್ ಟ್ರೀ ಕಾಲೇಜಿನ ಸಮವಸ್ತ್ರವನ್ನು ಬದಲಾಯಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ಯೂಪಲ್ಸ್ ಟ್ರೀ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪಾಶ್ಚಾತ್ಯ ಸಂಸ್ಕೃತಿಯನ್ನು ಬಿಂಬಿಸುವ ಸಮವಸ್ತ್ರವನ್ನು ಜಾರಿಗೊಳಿಸಲಾಗಿದೆ. ಇದು ಸಹಪಾಠಿ ವಿದ್ಯಾರ್ಥಿಗಳ ಕೆಟ್ಟ ದೃಷ್ಟಿಗೆ ಕಾರಣವಾಗಿದೆ. ಈ ಬಗ್ಗೆ ಹಲವಾರು ಬಾರಿ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡರೂ ವಸ್ತ್ರ ಸಂಹಿತೆಯನ್ನ ಬದಲು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
Advertisement
Advertisement
ಸಮವಸ್ತ್ರ ಸಂಹಿತೆ ಬದಲು ಮಾಡುವಂತೆ ಕಾಲೇಜು ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿಗಳು ಹಾಗೂ ಪಿಯುಸಿ ಬೋರ್ಡ್ ಅಧಿಕಾರಿಗಳು ಸೂಚನೆ ನೀಡಬೇಕು ಎಂದು ಆಗ್ರಹಿಸಿದರು. ಬಳಿಕ ಉನ್ನತ ವೈದ್ಯಕೀಯ ಶಿಕ್ಷಣ ಸಚಿವ ತುಕಾರಾಂ ಅವರಿಗೆ ಮನವಿ ಸಲ್ಲಿಸಿದರು.
Advertisement
ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಶಿಕ್ಷಣಾಧಿಕಾರಿಗಳ ಜೊತೆಗೆ ಚರ್ಚೆ ಮಾಡುತ್ತೇನೆ. ಬಳಿಕ ವಸ್ತ್ರವಿನ್ಯಾಸ ಬದಲಿಸುವಂತೆ ಕಾಲೇಜು ಆಡಳಿತ ಮಂಡಳಿಗೆ ಆದೇಶ ನೀಡುತ್ತೇವೆ ಎಂದು ಹೇಳಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv