ಬಳ್ಳಾರಿ: ಕೋವಿಡ್-19 ಸೊಂಕಿತರ ಚಿಕಿತ್ಸೆ ಪ್ರಮಾಣ ಹೆಚ್ಚಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಜಿಲ್ಲಾಸ್ಪತ್ರೆ, ವಿಮ್ಸ್ ಮತ್ತು ಜಿಲ್ಲಾ ಆಸ್ಪತ್ರೆಯ ಎರಡು ಸೆಂಟರ್ ಗಳನ್ನು ಗುರುತಿಸಲಾಗಿದೆ. ಈ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೇರಿದಂತೆ ಇನ್ನಿತರ ಅಗತ್ಯ ವ್ಯವಸ್ಥೆಗಳನ್ನು ತುರ್ತಾಗಿ ಕೈಗೊಳ್ಳುವಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ನಡೆದ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಸುದೈವದಿಂದ ಇದೂವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೊಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಅನೇಕ ಸಭೆಗಳನ್ನು ನಡೆಸುವುದರ ಮುಖಾಂತರ ಎಲ್ಲ ಸಿದ್ಧತೆಗಳನ್ನು ಬಳ್ಳಾರಿ ಜಿಲ್ಲಾಡಳಿತ ಕೈಗೊಂಡಿರುವುದು ಪ್ರಶಂಸನೀಯ ಎಂದು ಹೇಳಿದರು.
Advertisement
Advertisement
ಜಿಲ್ಲೆಯಲ್ಲಿರುವ ಎಲ್ಲ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಎಂಆರ್ ಐ ಸ್ಕ್ಯಾನಿಂಗ್, ಸಿಟಿ ಸ್ಕ್ಯಾನ್, ಅಲ್ಟ್ರಾಸೌಂಡ್ ಸೇರಿದಂತೆ ಇನ್ನಿತರ ವೈದ್ಯಕೀಯ ಪರಿಕರಗಳು ಕೆಟ್ಟು ನಿಂತಿದ್ದರೆ ಜಿಲ್ಲಾಡಳಿತದ ಬಳಿ ಅಗತ್ಯ ಅನುದಾನ ಲಭ್ಯವಿದ್ದು ಕೂಡಲೇ ಅವುಗಳನ್ನು ದುರಸ್ತಿಪಡಿಸಬೇಕು ಎಂದು ಸೂಚಿಸಿದರು.
Advertisement
ಖಾಸಗಿ ವೈದ್ಯರ, ಆಸ್ಪತ್ರೆಗಳ ಸಹಕಾರ ಕೋರಿದ ಸಚಿವರು:
ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ವೈದ್ಯರುಗಳು ಹಾಗೂ ಆಸ್ಪತ್ರೆಗಳು ಕೋವಿಡ್-19 ವಿರುದ್ಧ ಸರ್ಕಾರ ನಡೆಸುತ್ತಿರುವ ಈ ಸವಾಲಿನ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದ ಸಚಿವ ಶ್ರೀರಾಮುಲು, ಕೋವಿಡ್-19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯೊಂದು ಮೀಸಲಿರಿಸುವ ಮತ್ತು ಖಾಸಗಿ ವೈದ್ಯರು ಈ ಹೋರಾಟದಲ್ಲಿ ಸಹಕರಿಸುವಂತೆ ಅವರು ಮನವಿ ಮಾಡಿದರು. ಇದಕ್ಕೆ ಐಎಂಎ ಜಿಲ್ಲಾಧ್ಯಕ್ಷ ಡಾ. ಅರುಣ ಹಾಗೂ ಡಾ.ಬಿ.ಕೆ.ಎಸ್ ಸುಂದರ್ ಅವರು ಈ ಹೋರಾಟದಲ್ಲಿ ನಮ್ಮ ಸಹಕಾರ ಸದಾ ಇರುತ್ತದೆ ಎಂದು ಸಮ್ಮತಿ ಸೂಚಿಸಿದರು.
Advertisement
2 ಸಾವಿರ ವೆಂಟಿಲೇಟರ್ ಖರೀದಿಗೆ ನಿರ್ಧಾರ:
ಕೋವಿಡ್-19 ಹಿನ್ನೆಲೆಯಲ್ಲಿ 2 ಸಾವಿರ ವೆಂಟಿಲೇಟರ್ ಗಳನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿ ಅವುಗಳನ್ನು ವಿದೇಶದಿಂದ ಖರೀದಿಸಿ ತರಲಾಗುವುದು ಎಂದು ಅವರು ಸಭೆಗೆ ತಿಳಿಸಿದರು. ಕೇಂದ್ರ ಸರ್ಕಾರವು ವೆಂಟಿಲೇಟರ್ ಗಳನ್ನು ಖರೀದಿಸಿ ನೀಡಲಾಗುವುದು ಎಂದು ತಿಳಿಸಿದೆ. ಈ ಕೋವಿಡ್-19 ವಿರುದ್ಧದ ಹೋರಾಟಕ್ಕೆ ಸಾಕಷ್ಟು ಪ್ರಮಾಣದಲ್ಲಿ ಹಣ ಮೀಸಲಿರಿಸಿದೆ ಎಂಬುದನ್ನು ಅವರು ಸಭೆಗೆ ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್-19 ಚಿಕಿತ್ಸಗೆ ಸಂಬಂಧಿಸಿದಂತೆ ವೆಂಟಿಲೆಟರ್ ಸೇರಿದಂತೆ ಅಗತ್ಯ ಪರಿಕರಗಳನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಟಾಸ್ಕ್‍ಪೋರ್ಸ್ ಸಮಿತಿ ಸಭೆಯಲ್ಲಿ ಸೂಚಿಸಿದ್ದಾರೆ ಎಂದು ವಿವರಿಸಿದ ಅವರು, ದೇಶಕ್ಕೆ ಕೋವಿಡ್-19 ರೂಪದಲ್ಲಿ ಸಂಕಷ್ಟದ ಸ್ಥಿತಿ ಎದುರಾಗಿದೆ. ಈ ಹೋರಾಟದಲ್ಲಿ ವೈದ್ಯರು, ಪೊಲೀಸರು, ಜಿಲ್ಲಾಡಳಿತ, ಮಾಧ್ಯಮ ಸೇರಿದಂತೆ ಎಲ್ಲರ ಪಾತ್ರ ಶ್ಲಾಘನೀಯ ಎಂದರು.
ಇಂದು ಬಳ್ಳಾರಿಯ ಜಿಲ್ಲಾಸ್ಪತ್ರೆಯ #Covid19 Isolation Wardಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ, ಸೌಕರ್ಯಗಳ ಪರಿಶೀಲನೆ ನಡೆಸಲಾಯಿತು. ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸಿ, ನಾಡಿನ ಜನರ ಹಿತ ಕಾಯಲು ವೈಯಕ್ತಿಕ ಜೀವನವನ್ನು ಬದಿಗೊತ್ತಿ, ಹಗಲಿರುಳು ಸಲ್ಲಿಸುತ್ತಿರುವ ಸೇವೆಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. pic.twitter.com/AAUunRFoTU
— B Sriramulu (@sriramulubjp) March 26, 2020
ಪ್ರಧಾನಮಂತ್ರಿಗಳು ಹೇಳಿದಂತೆ 21 ದಿನಗಳ ಕಾಲ ಮನೆಯಲ್ಲಿಯೇ ಇರುವುದಕ್ಕೆ ಲಕ್ಷ್ಮಣರೇಖೆ ಹಾಕಿಕೊಳ್ಳುವುದರ ಮೂಲಕ ಈ ಸರಪಳಿಯನ್ನು ನಾವು ಮುರಿಯಬೇಕು ಮತ್ತು ಈ ಸವಾಲನ್ನು ಗೆಲ್ಲಬೇಕು ಎಂದು ಅವರು ಮನವಿ ಮಾಡಿದರು.