ಬಳ್ಳಾರಿ: ತಮ್ಮ ಹೋಟೆಲ್‍ಗಳಿಗೆ ದೇಶ ಮತ್ತು ವಿದೇಶಗಳಿಂದ ಆಗಮಿಸುವ ಪ್ರವಾಸಿಗರ ಮಾಹಿತಿಯನ್ನು ತಕ್ಷಣ ಗಮನಕ್ಕೆ ತರುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರು ಹೋಟಲ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೊರೊನಾಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲೆಯ ಹೋಟೆಲ್ ಮಾಲೀಕರೊಂದಿಗೆ ಡಿಸಿ ನಕುಲ್ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳ ಹಾಗೂ ವಿದೇಶಗಳ ಅದರಲ್ಲೂ ವಿಶೇಷವಾಗಿ ಕೊರೊನಾ ಸೊಂಕು ಕಂಡುಬಂದ ದೇಶಗಳಿಂದ ಬರುವ ಪ್ರವಾಸಿಗರ ಮಾಹಿತಿಯನ್ನು ತಕ್ಷಣ ನೀಡಲೇಬೇಕು ಎಂದರು.
Advertisement
Advertisement
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಜನಸ್ಪಂದನಾ ಕೇಂದ್ರಕ್ಕೆ ಮಾಹಿತಿ ನೀಡಬಹುದಾಗಿದೆ. ಈ ಕೇಂದ್ರದ ರೂಂ ಮೊ.ನಂ: 82778 88866 ಹಾಗೂ ದೂ: 08392-277100ಗೆ ಕರೆ ಮಾಡಬಹುದು ಮತ್ತು ವಾಟ್ಸಾಪ್ ಮಾಡಬಹುದು. 1077 ಉಚಿತ ಸಹಾಯವಾಣಿಗೂ ಕರೆ ಮಾಡಿ ಮಾಹಿತಿ ನೀಡಬಹುದು. ಈ ಕೇಂದ್ರದಲ್ಲಿ ವೈದ್ಯಕೀಯ ಸಿಬ್ಬಂದಿ ಲಭ್ಯವಿರುತ್ತಾರೆ. ನಮ್ಮ ಸಿಬ್ಬಂದಿ 24 ಗಂಟೆಗಳ ಕಾಲ ಈ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಡಿಸಿ ನಕುಲ್ ತಿಳಿಸಿದರು.
Advertisement
ಕೊರೊನಾ ವೈರಸ್‍ಗೆ ಸಂಬಂಧಿಸಿದ ಲಕ್ಷಣಗಳ ಬಗ್ಗೆ ಸಭೆಯಲ್ಲಿ ವಿವರಿಸಿದ ಡಿಸಿ ನಕುಲ್ ಅವರು, ಈ ರೀತಿಯ ಲಕ್ಷಣಗಳು ಪ್ರವಾಸಿಗರಲ್ಲಿ ಕಂಡು ಬಂದಲ್ಲಿಯೂ ಸಹ ಮಾಹಿತಿ ನೀಡಿ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಭಯಬೇಡ ಜಾಗೃತಿಯಿರಲಿ ಎಂದು ಹೇಳಿದರು.