– ಸಿಎಂ ಸೂಚನೆ ಬಳಿಕ ಷರತ್ತುಬದ್ಧ ಅನುಮತಿ
ಬಳ್ಳಾರಿ: ವಿಜಯೇಂದ್ರ ನೇತೃತ್ವದ ಬಿಜೆಪಿ ಪಾದಯಾತ್ರೆಯ (BJP Padyatra) ಸಮಾರೋಪ ಸಮಾರಂಭಕ್ಕೆ ಬಳ್ಳಾರಿಯ (Ballari) ಎಕ್ಸ್ ಮುನಿಸಿಪಲ್ ಶಾಲಾ ಮೈದಾನ ಬಳಸಲು ಕೊನೆಗೂ ಬಳ್ಳಾರಿ ಜಿಲ್ಲಾಡಳಿತ ಅನುಮತಿ ನೀಡಿದೆ.
ಬಿಜೆಪಿ ನಾಯಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಿಎಂ ಸೂಚನೆ ಮೇರೆಗೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.
ಸೆಪ್ಟೆಂಬರ್ 10 ರಂದು ಮಧ್ಯಾಹ್ನ 3 ರಿಂದ ರಾತ್ರಿ 8 ಗಂಟೆ ವರೆಗೆ ಸಮಾರೋಪ ಸಮಾವೇಶ ನಡೆಸಲು ಬಿಜೆಪಿ ಪೂರ್ವತಯಾರಿ ಮಾಡಿಕೊಂಡಿದೆ.
