Connect with us

Bellary

ಫ್ಯಾನ್ ಬಿದ್ದು ಜೆಎಸ್‍ಡಬ್ಲ್ಯು ಕಾರ್ಮಿಕ ಸಾವು

Published

on

ಬಳ್ಳಾರಿ: ಫ್ಯಾನ್ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಮೃತ ದುರ್ದೈವಿ ಕಾರ್ಮಿಕನನ್ನು ಜಿತೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ವಿದ್ಯಾನಗರದ ಜೆಎಸ್ ಡಬ್ಲ್ಯು ಸ್ಟೀಲ್ಸ್‍ನ ಉತ್ಪಾದನಾ ಘಟಕವೊಂದರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸ್ಟೀಲ್ ಉತ್ಪಾದಕ ಘಟಕವೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಘಟಕದ ಫ್ಯಾನ್ ಹಠಾತ್ ಕೆಳಗಡೆ ಬಿದ್ದಿದೆ. ಆದ್ದರಿಂದ ಅಕ್ಕಪಕ್ಕದಲ್ಲಿದ್ದ ಕಬ್ಬಿಣದ ಸರಳುಗಳು ಆತನಿಗೆ ಚುಚ್ಚಿಕೊಂಡಿವೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಆತನನ್ನ ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

ಈ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *