ಬಳ್ಳಾರಿ: ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ಹಂಪಿ ಉತ್ಸವವನ್ನು ಅದ್ದೂರಿಯಾಗಿ ಮಾಡಲು ಸರ್ಕಾರ ತೀರ್ಮಾನಿಸಿದೆ.
ಹಂಪಿ ಉತ್ಸವದ ಅಂಗವಾಗಿ ಶನಿವಾರ ಹಂಪಿ ವಿರೂಪಾಕ್ಷ ದೇವಾಲಯದ ಪಕ್ಕದಲ್ಲಿ ಹರಿಯುವ ತುಂಗಭದ್ರಾ ನದಿಗೆ ಆರತಿ ಬೆಳಗುವ ಮೂಲಕ ಡಿಸಿಎಂ ಲಕ್ಷ್ಮಣ ಸವದಿ ಜಾಲನೆ ನೀಡಿದರು. ವಿದ್ಯಾರಣ್ಯ ಭಾರತಿ ಸ್ವಾಮೀಜಿ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ಲಕ್ಷ್ಮಣ ಸವದಿ ಅವರು ಬಾಗಿನ ಸಮರ್ಪಿಸಿದರು. ಈ ವೇಳೆ ಶಾಸಕ ಆನಂದ್ ಸಿಂಗ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Advertisement
Advertisement
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಸಾರಿಗೆ ಸಂಸ್ಥೆಯು ನಗರದಿಂದ ಹಂಪಿಗೆ ಬಸ್ ವ್ಯವಸ್ಥೆ ಕಲ್ಪಿಸಿತ್ತು. ದೇಶದ ಸುಭಿಕ್ಷೆಗಾಗಿ ಕಳೆದ ಮೂರು ವರ್ಷಗಳಿಂದ ತುಂಗಾ ಆರತಿ ಕಾರ್ಯಕ್ರಮ ನಡೆದುಕೊಂಡು ಬರುತ್ತಿದ್ದೆ. ಕಾರ್ಯಕ್ರಮಕ್ಕೂ ಮುನ್ನ ಭುವನೇಶ್ವರಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು. ನದಿ ತಟದಲ್ಲಿ ಸಾಲಾಗಿ ದೀಪಗಳ ಅಲಂಕಾರ ಮಾಡಲಾಗಿತ್ತು.
Advertisement
ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಲಕ್ಷ್ಮಣ ಸವದಿ ಅವರು, ಹಂಪಿ ಉತ್ಸವಕ್ಕೆ ಯಾವುದೇ ರೀತಿಯಲ್ಲಿ ಹಣದ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಈಗಾಗಲೇ ಸರ್ಕಾರ 3 ಕೋಟಿ ರೂ. ಬಿಡುಗಡೆ ಮಾಡಿದೆ. ಹೆಚ್ಚುವರಿಯಾಗಿ 5 ಕೋಟಿ ರೂ. ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ಅಲ್ಲದೆ ಬರುವ ಬಜೆಟ್‍ನಲ್ಲಿ ಹಂಪಿ ಉತ್ಸವಕ್ಕಾಗಿ ಬಜೆಟ್‍ನಲ್ಲಿ ಹಣ ಮತ್ತು ಉತ್ಸವವನ್ನು ಪ್ರತಿ ವರ್ಷವೂ ಒಂದೇ ದಿನಾಂಕದಂದು ಮಾಡಲು ನಿರ್ಧಾರ ಮಾಡಲಾಗುವುದು ಅಂತ ಸಿಎಂ ತಿಳಿಸಿದ್ದಾರೆ ಎಂದು ತಿಳಿಸಿದರು.