ಬಳ್ಳಾರಿ: ಪ್ರಚಾರಕ್ಕೆ ತೆರಳಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಶೂ ಹಾಕಲು ಸಹಾಯ ಮಾಡಿದ ಪ್ರಸಂಗ ಇಂದು ನಡೆಯಿತು.
ಹೊಸಪೇಟೆಯಲ್ಲಿ ಬಿಜೆಪಿ ಮುಖಂಡ ಭರಮಲಿಂಗನಗೌಡ ನಿವಾಸಕ್ಕೆ ಬಿಎಸ್‍ವೈ ಭೇಟಿ ನೀಡಿದ್ದರು. ಮತ ಕೇಳಿದ ಬಳಿಕ ಬಿಎಸ್‍ವೈ ಅವರಿಗೆ ಆನಂದ್ ಸಿಂಗ್ ತಮ್ಮ ಕೈಯಾರೆ ಶೂ ತಂದು ಕೊಟ್ಟರು. ಇದನ್ನು ಅಲ್ಲೇ ಇದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ.
ಒಟ್ಟಿನಲ್ಲಿ ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆಗೆ ಅಭ್ಯರ್ಥಿಗಳು ರೆಡಿಯಾಗಿದ್ದು, ಭರ್ಜರಿ ಪ್ರಚಾರಕ್ಕೆ ಧುಮುಕಿದ್ದಾರೆ. ಇತ್ತ ಪಕ್ಷದ ನಾಯಕರು ಕೂಡ ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.