ಬಳ್ಳಾರಿ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರಿಗೆ ಮತ ನೀಡಿ ಫೋಟೋ ಕ್ಲಿಕ್ಕಿಸಿಕೊಂಡ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ಹೊಸಪೇಟೆಯಲ್ಲಿ ಮತದಾನದ ವೇಳೆ ಮೊಬೈಲ್ ತೆಗೆದುಕೊಂಡು ಮತಗಟ್ಟೆಗೆ ತೆರಳಿದ್ದ ರಜಾಕ್ ಎಂಬಾತನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಮತಗಟ್ಟೆ ಸಂಖ್ಯೆ 62ರ ಇವಿಎಂನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಕುರಿತು ಸಾಕ್ಷಿಗಾಗಿ ರಜಾಕ್ ಫೋಟೋ ಸೆರೆಹಿಡಿದಿದ್ದ. ಅಲ್ಲದೇ ತಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ತೋರಿಸಲು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ.
Advertisement
Advertisement
ಈ ಕುರಿತು ಮಾಹಿತಿ ಪಡೆದ ಚುನಾವಣಾಧಿಕಾರಿ ಲೋಕೇಶ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಅನ್ವಯ ಪೊಲೀಸರು ರಜಾಕ್ ನನ್ನು ಬಂಧಿಸಿದ್ದಾರೆ. ರಹಸ್ಯ ಮತದಾನ ನಿಯಮ ಉಲ್ಲಂಘಿಸಿದ ಹಿನ್ನೆಲೆಯ ಆರೋಪದಲ್ಲಿ ರಜಾಕ್ ಬಂಧನವಾಗಿದೆ. ನಿಯಮಗಳ ಅನ್ವಯ ಮತಗಟ್ಟೆಯಲ್ಲಿ ಮೊಬೈಲ್ ತೆಗೆದುಕೊಂಡು ಹೋಗಲು ನಿಷೇಧವಿದೆ. ಆದರೂ ಮತಗಟ್ಟೆಯಲ್ಲಿ ಮೊಬೈಲ್ ಸಂಚಾರ ಸರ್ವೆ ಸಾಮಾನ್ಯ, ಮತಗಟ್ಟೆಯ ಅಧಿಕಾರಿಗಳ ನಿರ್ಲಕ್ಷವೇ ಕಿಡಿಗೇಡಿಗಳ ಕೃತ್ಯಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.
Advertisement
ಮಂಡ್ಯ ಲೋಕಸಭೆ ಉಪಚುನಾವಣೆ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗೆ ಮತ ನೀಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿಷೇಧದ ನಡುವೆಯೂ ಮೊಬೈಲ್ ತೆಗೆದುಕೊಂಡು ಹೋಗಿರುವ ಮತದಾರರೊಬ್ಬ ಬಹಿರಂಗಗೊಳಿಸಿದ್ದಾರೆ. ಆದರೆ ಆ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=Bx3DXkFitoI