– ಬಿಜೆಪಿ ನಾಯಕರ ಕೊನೆಯ ಪ್ರಯತ್ನ..?
ಬಳ್ಳಾರಿ: ಗಣಿ ನಾಡು ಬಳ್ಳಾರಿಯ ಮಹಾನಗರ ಪಾಲಿಕೆ ಚುನಾವಣೆ ಇಂದು ನಡೆಯಲಿದೆ. ಇಂದು ಪಾಲಿಕೆ ಗದ್ದುಗೆ ಏರುವವರು ಯಾರು ಎನ್ನುವ ಪ್ರಶ್ನ ಬಳ್ಳಾರಿ ಜನತೆಯನ್ನು ಕಾಡುತ್ತಿದೆ. ಈಗಾಗಲೇ ಸ್ಪಷ್ಟವಾದ ಬಹುಮತ ಪಡೆದಿರುವ ಕಾಂಗ್ರೆಸ್ ಅಧಿಕಾರ ಹಿಡಿಯುವ ಹುಮ್ಮಿಸ್ಸಿನಲ್ಲಿ ಇದೆ. ಆದರೆ ಬಿಜೆಪಿ ಪಕ್ಷದಲ್ಲಿ ಸಹ ಕೊನೆಯ ಪ್ರಯತ್ನ ನಡೆದಿದೆ ಎನ್ನುಲಾಗುತ್ತಿದೆ.
Advertisement
ಹೌದು. ಇದು ಗಣಿ ನಾಡು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಉಪ ಮೇಯರ್ ಚುನಾವಣೆ ನಡೆಯಲಿದ್ದು, ಬಳ್ಳಾರಿ ನಗರದ ಪ್ರಥಮ ಪ್ರಜೆ ಯಾರು ಎನ್ನುವ ಕುತೂಹಲ ಎಲ್ಲರಿಗೂ ಕಾಡುತ್ತಿದೆ. ಕಳೆದ ಮೂರು ದಿನಗಳ ಹಿಂದೆ, ಬಳ್ಳಾರಿ ನಗರದ ಕಾಂಗ್ರೆಸ್ ಪಾಲಿಕೆ ಸದಸ್ಯರು ಬಿಜೆಪಿ ಆಪರೇಷನ್ ಕಮಲಕ್ಕೆ ಹೆದರಿ ರೆಸಾರ್ಟ್ ರಾಜಕಾರಣಕ್ಕೆ ಕಾಂಗ್ರೆಸ್ ನಾಯಕರು ನಾಂದಿ ಹಾಡಿದ್ದರು. ಇದಕ್ಕೆ ಪ್ರಮುಖ ಕಾರಣ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಪಾಲಿಕೆ ಸದಸ್ಯರ ಹೈಜಾಕ್ ಮಾಡಲು ಮುಂದಾಗಿದ್ದರು.
Advertisement
Advertisement
ಕಾರಣ ತಮ್ಮ ಪಾಲಿಕೆ ಸದಸ್ಯರನ್ನು ಬಿಜೆಪಿ ಆಮಿಷದಿಂದ ದೂರ ಇಡಲು ಕಾಂಗ್ರೆಸ್ ನ 21 ಹಾಗೂ ಪಕ್ಷೇತರ ಐದು ಜನ ಸದಸ್ಯರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗಿದ್ದರು. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರ ಅಚರ ನೇತೃತ್ವದಲ್ಲಿ ಇಂದು ಪಾಲಿಕೆ ಸದಸ್ಯರು ಬಳ್ಳಾರಿಯಿಂದ ಹೈಟೆಕ್ ಬಸ್ ನಲ್ಲಿ ಬೆಂಗಳೂರಿನ ಕಡೆ ಪ್ರಯಾಣ ಬೆಳೆಸಿದ್ದರು. ಒಟ್ಟು 39 ಸದಸ್ಯರ ಬಲ ಇರೋ ಪಾಲಿಕೆಯಲ್ಲಿ 21 ಕಾಂಗ್ರೆಸ್ 5 ಪಕ್ಷೇತರರು ಮತ್ತು 13 ಬಿಜೆಪಿ ಸದಸ್ಯರು ಇದ್ದಾರೆ. ಆದರೆ ಕಾಂಗ್ರೆಸ್ ಗೆ ಪಾಲಿಕೆ ಚುನಾವಣೆಯಲ್ಲಿ ಸ್ಪಷ್ಟವಾದ ಬಹುಮತ ಇದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಮಡಿದ ನವೀನ್ ಪಾರ್ಥೀವ ಶರೀರ ಕೊನೆಗೂ ತಾಯ್ನಾಡಿಗೆ
Advertisement
ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷರ ಜೊತೆಯಲ್ಲಿ ಒಂದು ಸುತ್ತಿನ ಮಾತುಕತೆ ಮಾಡಿರುವ ಪಾಲಿಕೆ ಸದಸ್ಯರು ತಮ್ಮ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕಾಂಗ್ರೆಸ್ ನಿಂದ ಯಾರಾಗ ಬೇಕು ಮೇಯರ್ ಎಂದು ಎಲ್ಲರೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿತೇ ಎರಡು ಪಂಗಡಗಳಿದ್ದು, ಈ ಎರಡು ಗುಂಪಿನಲ್ಲಿ ಈವರೆಗೂ ಒಮ್ಮತದ ಅಭಿಪ್ರಾಯ ಮೂಡಿಲ್ಲ. ಹೀಗಾಗಿ ಇಂದು ಮೇಯರ್ ಪಟ್ಟ ಯಾರಿಗೆ ಒಲಿಯಲಿದೆ ಎಂದು ಕಾದು ನೋಡಬೇಕಿದೆ.
ಈಗಾಗಲೇ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ವಿಜೆಪಿ ತೆರೆಮರೆಯಲ್ಲಿ ಕಸರತ್ತು ನಡೆಸಿದೆ. ಕೊನೆಯ ಪ್ರಯತ್ನ ಮಾಡಲು ಬಿಜೆಪಿ ಮುಂದಾಗಿದೆ. ಅಲ್ಲದೇ ಇಂದು ನಡೆಯುವ ಪಾಲಿಕೆ ಚುನಾವಣೆಯಲ್ಲಿ ಸಹ ಪಾಲ್ಗೊಳ್ಳಲು ಮುಂದಾಗಿದ್ದು, ಬಿಜೆಪಿ ಕೊನೆ ಗಳಿಗೆಯಲ್ಲಿ ಏನ್ ಪ್ಲ್ಯಾನ್ ಮಾಡಿದೆ ಎಂಬುದು ಇನ್ನೂ ಕೆಲವೇ ಗಂಟೆಯಲ್ಲಿ ಹೊರಬೀಳಲಿದೆ. ಇದನ್ನೂ ಓದಿ: ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನಮಾಡಲು ಕುಟುಂಬಸ್ಥರ ನಿರ್ಧಾರ