ಬಳ್ಳಾರಿ: ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ಶ್ರೀರಾಮುಲು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷಣಗಳನ್ನು ರಾಜ್ಯದಲ್ಲಿ ಶ್ರೀರಾಮುಲು ಹೊಂದಿದ್ದಾರೆ. ಇತ್ತ ಕೇದಾರನಾಥ ಸ್ವಾಮೀಜಿ ಕೂಡ ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಆಗುವ ಲಕ್ಷಣಗಳಿವೆ. ಅವರಿಗೆ ಆಶೀರ್ವಾದ ಮಾಡಿ, ಬೆಳವಣಿಗೆಗೆ ಶ್ರಮಿಸಿ ಅಂತಾ ಸಲಹೆ ನೀಡಿದ್ದಾರೆ. ಹೀಗಾಗಿ ಅವರು ಖಂಡಿದ ಉಪಮುಖ್ಯಮಂತ್ರಿ ಅಲ್ಲಲ್ಲ, ಮುಖ್ಯಮಂತ್ರಿಯೇ ಆಗುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
Advertisement
Advertisement
ಒಂದು ಕಾಲದಲ್ಲಿ ವಿ.ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯತ್ತು. ಹೀಗಾಗಿ ಸೋಮಣ್ಣ ಅವರು ಬಿ.ಎಸ್.ಯಡಿಯೂಪ್ಪ ಅವರ ವಿರುದ್ಧ ಕಿಡಿಕಾರುತ್ತಿದ್ದರು. ಈಗ ಉತ್ತಮ ವೇದಿಕೆ ಸಿಕ್ಕಿತು ಅಂತಾ ಶ್ರೀರಾಮುಲು ಅವರನ್ನು ಎತ್ತಿಕಟ್ಟಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈಗ ಪ್ರಚಾರದ ಪ್ರತಿ ಹಂತದಲ್ಲಿಯೂ ಶ್ರೀರಾಮುಲು ಪರ ಬ್ಯಾಟ್ ಬೀಸುತ್ತಿದ್ದಾರೆ.
Advertisement
ವಿ.ಸೋಮಣ್ಣ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರು, ನನಗೆ ಏನು ಗೊತ್ತಿಲ್ಲ ಎಂದು ಹಾರಿಕೆ ಉತ್ತರ ಕೊಟ್ಟಿದ್ದಾರೆ. ವಿ.ಸೋಮಣ್ಣ ಅವರ ಹೇಳಿಕೆ ಪಕ್ಷದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಶ್ರೀರಾಮುಲು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಅಂತಾ ಬಿಜೆಪಿ ನಾಯಕರು ಎಂದಿಗೂ ಹೇಳಿಲ್ಲ. ಆದರೆ ವಿ.ಸೋಮಣ್ಣ ಅವರ ದಿಢೀರ್ ಹೇಳಿಕೆಯಿಂದಾಗಿ ನಾಯಕರನ್ನು ಮುಜುಗುರಕ್ಕೆ ಗುರಿಯಾಗಿಸಿದೆ ಎನ್ನಲಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv