ಬಳ್ಳಾರಿ: ಕುರ್ಚಿ ಉಳಿಸಿಕೊಳ್ಳಲು ಹೆಚ್‍ಡಿಕೆ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಈ ರೀತಿಯ ಫೋನ್ ಕದ್ದಾಲಿಕೆ ಯಾರೂ ಮಾಡಬಾರದು. ಇದು ತಪ್ಪು ಎಂದು ಗೊತ್ತಿದ್ದರೂ ಮಾಡಿದ್ದಾರೆ. ಇದರಲ್ಲಿ ಕೆಲ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ ಎಂದು ಶಾಸಕ ಶ್ರೀರಾಮುಲು ಆರೋಪ ಮಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಎಂ ಯಡಿಯೂರಪ್ಪ ಅವರು ಸಿಬಿಐಗೆ ವಹಿಸಿದ್ದಾರೆ ಅದನ್ನು ನಾನು ಸ್ವಾಗತ ಮಾಡುತ್ತೇನೆ. ಸರ್ಕಾರ ಉಳಿಸಲು ಫೋನ್ ಕದ್ದಾಲಿಕೆ ಮಾಡಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಕುಮಾರಸ್ವಾಮಿ ಹೀಗೆ ಮಾಡಿದ್ದಾರೆ. ಸಿಬಿಐ ವಹಿಸಿದ ಬಳಿಕ ಉಲ್ಟಾ ಹೊಡೆಯುತ್ತಿದ್ದಾರೆ. ರಾಷ್ಟ್ರ ಮಟ್ಟದ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿದೆ. ಹೀಗಾಗಿ ಸಿಬಿಐ ತನಿಖೆಯಾಗಲಿ ಸಿಬಿಐ ಬಗ್ಗೆ ಯಾಕೆ ನಿಮ್ಮ ಅಪಸ್ವರ. ತನಿಖೆಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.
Advertisement
Advertisement
ನೆರೆಯಿಂದ ಲಕ್ಷ ಕೋಟಿ ಹಾನಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ನನ್ನದೊಂದು ಪ್ರಶ್ನೆ. ಮೋದಿಯವರು ವೈಮಾನಿಕ ಸಮೀಕ್ಷೆ ಮಾಡಿಲ್ಲ ಎಂದು ಹೇಳುತ್ತಿರಲ್ಲ. ಆದರೆ ಸ್ವಕ್ಷೇತ್ರ ಬಾದಾಮಿಗೆ ನೀವು ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿದರು.
Advertisement
Advertisement
ಸಿದ್ದರಾಮಯ್ಯ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಬಾದಾಮಿ ಅದನ್ನು ನಿರ್ಲಕ್ಷ್ಯ ಮಾಡಿ ದೆಹಲಿಗೆ ಹೋಗುತ್ತಾರೆ. ಬಿರಿಯಾನಿ ತಿನ್ನುತ್ತಾರೆ ಆಗ ಕಣ್ಣಿಗೇನಾಗೋಲ್ವಾ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ನಾನು ಮಾಧ್ಯಮದ ಮೂಲಕ ನೋಡಿದ್ದೇನೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಪಕ್ಷಕ್ಕಾಗಿ ದುಡಿಯಲು ಬಂದಿದ್ದೇನೆ. ಹೈಕಮಾಂಡ್ ನಿಲುವು ಸ್ಪಷ್ಟವಾಗಿದೆ ಅದನ್ನು ನಾನು ಒಪ್ಪುತ್ತೇವೆ. ನನಗೆ ಸಚಿವ ಸ್ಥಾನ ನೀಡೋ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.