ಬಳ್ಳಾರಿ: ಬಳ್ಳಾರಿ-ಸಿರಗುಪ್ಪ ಹೈವೇ ರಸ್ತೆಯಲ್ಲಿ ಬಳ್ಳಾರಿ ಟ್ರಾಫಿಕ್ ಪೊಲೀಸರು ಪರಿಶೀಲನೆ ಹೆಸರಲ್ಲಿ ವಾಹನ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹೈವೇ ಮಾರ್ಗವಾಗಿ ಸಂಚರಿಸುವ ವಾಹನಗಳ ತಡೆದು ಸರಕು ಹಾಗೂ ವಾಹನ ತಪಾಸಣೆ ಮಾಡುತ್ತಾರೆ. ಎಲ್ಲ ದಾಖಲಾತಿ ಸರಿಯಾಗಿ ಇದ್ದರೂ 3 ರಿಂದ 5 ಸಾವಿರ ರೂ.ವರೆಗೂ ಲಂಚಕ್ಕೆ ಬೇಡಿಕೆ ಇರಿಸುತ್ತಿದ್ದಾರೆ ಎಂದು ಜನ ದೂರುತ್ತಿದ್ದಾರೆ.
ಸಂಚಾರಿ ಪೊಲೀಸರು ಸರಕು ಸಾಗಾಣೆಯ ವಾಹನಗಳನ್ನೇ ಟಾರ್ಗೆಟ್ ಮಾಡಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ. ಈ ಮಾರ್ಗದ ವಾಹನಗಳ ಚಾಲಕರಿಗೆ ಅನಗತ್ಯ ತೊಂದರೆ ನೀಡುತ್ತಿದ್ದಾರೆ. ಕೇಳಿದಷ್ಟು ಹಣ ನೀಡದಿದ್ದರೆ ವಾಹನ ಜಪ್ತಿ ಮಾಡಿ ಪ್ರಕರಣ ದಾಖಲಿಸುವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ.