ವಿಜಯನಗರ(ಬಳ್ಳಾರಿ): ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗ್ತಿದ್ದವರ ಮೇಲೆ ಪೊಲೀಸರು ದರ್ಪ ತೋರಿದ ಘಟನೆಯೊಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ.
ಹೊಸಪೇಟೆಯ ಮೂರಂಗಡಿ ವೃತ್ತದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಾರಿಗೆ ಫೈನ್ ಹಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಪಟ್ಟಣ ಸೆರಗು ಗ್ರಾಮದಿಂದ ಕುಂಟುಂಬ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಕಾರು ತಡೆದ ಪೊಲೀಸರು ದುರ್ವರ್ತನೆ ತೋರಿದ್ದಾರೆ.
Advertisement
Advertisement
ಪೋಷಕರು ತಮ್ಮ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪೊಲೀಸರು ಕಾರು ತಡೆದಿದ್ದಾರೆ. ಈ ವೇಳೆ ಪಾಪುಗೆ ಹುಷಾರಿಲ್ಲ, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಪೋಷಕರು ಪರಿಪರಿಯಾಗಿ ಬೇಡಿಕೊಂಡರೂ ಪೊಲೀಸರು ಕ್ಯಾರೇ ಎಂದಿಲ್ಲ. ಇದನ್ನೂ ಓದಿ: ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಆಗ್ತಿದೆ: ನಲಪಾಡ್
Advertisement
Advertisement
ಕಾರು ತಡೆದು ಕ್ರೇನ್‍ಗೆ ಏರಿಸಿದ ಪೊಲೀಸರು, ಲೈಸನ್ಸ್ ಸೇರಿದಂತೆ ಡ್ಯಾಕ್ಯುಮೆಂಟ್ ತೋರಿಸಿ ಎಂದು ಪಟ್ಟು ಹಿಡಿದರು. ಪೊಲೀಸರ ಅತಿರೇಕದ ವರ್ತನೆಗೆ ಮಗು ಸಮೇತ ನಡು ರಸ್ತೆಯಲ್ಲೇ ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ. ಪರಿಣಾಮ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಾರ್ವಜನಿಕರು ಪೊಲೀಸರಿಗೆ ಹಿಡಿ ಶಾಪ ಹಾಕಿದ ಪ್ರಸಂಗ ನಡೆದಿದೆ.