ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.
- Advertisement 2
2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಸರ್ಕಾರಿ ಅಂಗನವಾಡಿಗಳ ಕರೆಂಟ್ ಬಿಲ್ ಕಟ್ಟಲು ದುಡ್ಡಿಲ್ಲ – ಫ್ಯೂಸ್ ಕಿತ್ತ ಬೆಸ್ಕಾಂ
- Advertisement 3
ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.
- Advertisement 4